ಧಾರವಾಡ

ವೀರಶೈವ-ಲಿಂಗಾಯತ ರಿಟ್ ಅರ್ಜಿ ಇತ್ಯರ್ಥ

Published On :

ಧಾರವಾಡ: ಲಿಂಗಾಯತ ಎಂದಷ್ಟೇ ಜಾತಿ ಪ್ರಮಾಣ ಕೇಳಿದರೆ ವೀರಶೈವ-ಲಿಂಗಾಯತ ಎಂಬುದಾಗಿ ಪ್ರಮಾಣ ಪತ್ರ ನೀಡಿದ್ದ ಬೈಲಹೊಂಗಲ ತಹಸೀಲ್ದಾರ್ ಕ್ರಮ ವಿರೋಧಿಸಿ ಇಲ್ಲಿನ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ರಿಟ್ ಅರ್ಜಿ ಇತ್ತೀಚೆಗೆ ಇತ್ಯರ್ಥಗೊಂಡಿದೆ.
ಬೈಲಹೊಂಗಲದ ವೀರೇಶ ಹಲಕಿ ಎಂಬುವರು ತಮಗೆ ಲಿಂಗಾಯತ ಎಂದು ಜಾತಿ ಪ್ರಮಾಣ ಕೊಡಿ ಎಂದು ಅಲ್ಲಿನ ತಹಸೀಲ್ದಾರ್ ಅವರಿಗೆ ಕೇಳಿದಾಗ, ವೀರಶೈವ-ಲಿಂಗಾಯತ ಎಂಬುದಾಗಿ ಕೊಟ್ಟಿದ್ದರು. ಅಲ್ಲದೆ, ಸರ್ಕಾರಿ ಸುತ್ತೋಲೆಯಲ್ಲಿ ಹೀಗೆ ಇರುವುದರಿಂದ ವೀರಶೈವ-ಲಿಂಗಾಯತ ಎಂದು ಕೊಡಬೇಕಾಗುತ್ತದೆ ಎಂದು ಅವರು ಸ್ಪಷ್ಟನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ವೀರೇಶ ಅವರು ಸರ್ಕಾರಕ್ಕೆ ಬೆಳಗಾವಿ ಜಿಲ್ಲಾ ಲಿಂಗಾಯತ ಧರ್ಮ ಮಹಾಸಭಾದಿಂದ ಅರ್ಜಿ ಸಲ್ಲಿಸಿ ಹೈಕೋರ್ಟ್ ಮೆಟ್ಟಿಲು ಸಹ ಏರಿದ್ದರು.
ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ರಿಟ್ ಅರ್ಜಿಯಲ್ಲಿ ಲಿಂಗಾಯತ ಮಹಾಸಭಾ ಪಕ್ಷಗಾರ ಇಲ್ಲ. ಆದ್ದರಿಂದ ಸ್ವತ-ರಿಟ್ ಅರ್ಜಿದಾರರೇ ನೇರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೆ ಅದನ್ನು ಎದುರುಗಾರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿ ಆದೇಶ ನೀಡಿತು.
ರಿಟ್ ಅರ್ಜಿದಾರರ ಪರವಾಗಿ ನ್ಯಾಯವಾದಿ ಕೆ.ಎಸ್. ಕೋರಿಶೆಟ್ಟರ್ ವಕಾಲತು ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.