ಉಪನ್ಯಾಸಕರಿಗೆ ತರಬೇತಿ, ಮಾರ್ಗದರ್ಶನ
ಹುಬ್ಬಳ್ಳಿ: ಕೆ-ಸೆಟ್ ಮತ್ತು ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್)ಗೆ ಹಾಜರಾಗಬಯಸುವ ಉಪನ್ಯಾಸಕರಿಗೆ ಕಾಡಸಿದ್ದೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆ ವತಿಯಿಂದ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುವುದು. ಡಿಸೆಂಬರ್ 8ರಂದು ರಾಜ್ಯ ಸರ್ಕಾರ ಕೆ-ಸೆಟ್ ಪರೀಕ್ಷೆ ಆಯೋಜಿಸಿದ್ದು ಅದೇ ರೀತಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಡಿಸೆಂಬರ್ 29ರಂದು ನೆಟ್ ಪರೀಕ್ಷೆ ಆಯೋಜಿಸಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದ ಈ ಪ್ರವೇಶ ಪರೀಕ್ಷೆಗೆ ಕಾಲೇಜಿನ ಗಣಿತ ಶಾಸ್ತ್ರ ಸ್ನ್ನಾತಕೋತ್ತರ ವಿಭಾಗದ ಆಶ್ರಯದಲ್ಲಿ ಇದೇ ಸೆ. 22, 29 ಹಾಗೂ ಅಕ್ಟೋಬರ್ 4, 6 ಮತ್ತು 13ರಂದು ಒಟ್ಟು 5 ದಿನಗಳ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುವುದು. ಗುಲ್ಬರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ಬೆಂಗಳೂರಿನ ಕಾಲೇಜುಗಳ ಹಾಗೂ ವಿವಿಗಳ ತಜ್ಞ ಪ್ರಾಧ್ಯಾಪಕರು ತರಬೇತಿ ನೀಡಲಿದ್ದಾರೆ. ಅರ್ಹತಾ ಪರೀಕ್ಷೆ, ತರಬೇತಿ ಹಾಗೂ ಮಾರ್ಗದರ್ಶನದ ಕುರಿತ ಹೆಚ್ಚಿನ ಮಾಹಿತಿ ಮತ್ತು ನೋಂದಣಿಗೆ ಡಾ. ಎಂ.ಎಂ. ಪಟ್ಟಣಶೆಟ್ಟಿ 94482-54938 ಅವರನ್ನ್ನು ಸಂಪರ್ಕಿಸಬಹುದು ಎಂದು ಪ್ರಾಚಾರ್ಯ ಡಾ. ಎಂ.ಟಿ. ಕುರಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದ್ಯ ಮಾರಾಟ ನಿಷೇಧ
ಧಾರವಾಡ: ಗಣೇಶ ಹಬ್ಬದ ಸಮಯದಲ್ಲಿ ಜಿಲ್ಲೆಯ ಗ್ರಾಮಿಣ ಪ್ರದೇಶದಲ್ಲಿ ಕಾನೂನು, ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆ. 20ರಂದು ಸೂಚಿತ ಗ್ರಾಮಗಳಲ್ಲಿ ಆಯಾ ದಿನದಂದು ಮದ್ಯಪಾನ, ಮದ್ಯ ಮಾರಾಟ ನಿಷೇಧಿಸಿಬೇಕೆಂದು ಡಿಸಿ ಆದೇಶ ಹೊರಡಿಸಿದ್ದಾರೆ. ನಮೂದಿಸಿದ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿ, ಬಿಯರ್, ಬಾರ್, ಕ್ಲಬ್ ಹಾಗೂ ಮದ್ಯದ ಡಿಪೋ ಮುಚ್ಚಲು ಹಾಗೂ ಪರಿಸ್ಥಿತಿಗೆ ಅನುಗುಣವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.
ವಿವಿಧ ಕಾರ್ಯಚಟುವಟಿಕೆ ಉದ್ಘಾಟನೆ ನಾಳೆ
ಧಾರವಾಡ: ಕರ್ನಾಟಕ ಕಲಾ ಮಹಾವಿದ್ಯಾಲಯದ ಜಿಮಖಾನದ 2013-14ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಮತ್ತು ಇತರ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಲ್ಲಿನ ಸೃಜನಾ ರಂಗ ಮಂದಿರದಲ್ಲಿ ಸೆ. 18ರ ಬೆಳಗ್ಗೆ 10ಕ್ಕೆ ನಡೆಯಲಿದೆ. ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಆರ್. ಸುಬ್ರಹ್ಮಣ್ಯ ಉದ್ಘಾಟಿಸುವರು. ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಎಸ್. ಕಟ್ಟಿಮನಿ ಅಧ್ಯಕ್ಷತೆವಹಿಸುವರು. ಜಿಮಖಾನ ಉಪಾಧ್ಯಕ್ಷ ಡಾ. ರಾಜೇಶ್ವರಿ ಮಹೇಶ್ವರಯ್ಯ, ಕಾರ್ಯಾಧ್ಯಕ್ಷ ಡಾ.ಎಂ.ಬಿ. ದಳಪತಿ, ವಿದ್ಯಾರ್ಥಿ ಕಾರ್ಯದರ್ಶಿ ಮಂಜುಳಾ ಹ್ಯಾಟಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ರಾಚಯ್ಯ ಸುಭೆದಾರಮಠ
ನವಲಗುಂದ: ಸ್ಥಳೀಯ ನೀಲಮ್ಮನ ಕೆರೆ ಓಣಿಯ ನಿವಾಸಿ ಜಂಗಮ ಸಮಾಜದ ಹಿರಿಯರಾದ ರಾಚಯ್ಯ ಶಂಕ್ರಯ್ಯ ಸುಭೆದಾರಮಠ (56) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

