ಕಿಟೆಲ್ ಆಡಳಿತ ಮಂಡಳಿ ಕ್ರಮ ಖಂಡನೆ
ಧಾರವಾಡ: ಕಿಟೆಲ್ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರ ಮತ್ತು ಆಡಳಿತ ಮಂಡಳಿ ಕ್ರಮ ಖಂಡಿಸಿ ಕವಿಕಾಶಿ ಸಂಘದ ಆಶ್ರಯದಲ್ಲಿ ಕಿಟಲ್ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಇಲ್ಲಿನ ಆಲೂರು ವೆಂಕಟರಾವ್ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯರ ವಿರುದ್ಧ ಘೋಷಣೆ ಕೂಗುವ ಮೂಲಕ ಮಾನವ ಸರಪಳಿ ನಿರ್ಮಿಸಿದ ಪ್ರಭಟನಾಕಾರರು ರಸ್ತೆ ತಡೆ ನಡೆಸಿದರು. ಸಂಚಾರಕ್ಕೆ ಕೆಲಹೊತ್ತು ಅಡ್ಡಿಯಾಗುತ್ತಿದ್ದಂತೆ ಮಧ್ಯೆ ಪೊಲೀಸರು ಪ್ರವೇಶಿಸಿದರೂ ಕಿವಿಗೊಡದ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದರು. ಹಾಗಾಗಿ, ಕೆಲ ಕಾಲ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ವಿಜ್ಞಾನ ಮಹಾವಿದ್ಯಾಲಯದ ಸಸ್ಯಶಾಸ್ತ್ರ ವಿಷಯದ ಸಹ ಪ್ರಾಧ್ಯಾಪಕ ಡಾ. ಜಿ.ಆರ್. ವಿಕ್ಟರ್ ಅವರಿಗೆ ಶೋಕಾಸ್ ನೋಟಿಸ್ ನೀಡದೇ ಅವರನ್ನು ಅಮಾನತು ಮಾಡಲಾಗಿದೆ. ಆಡಳಿತ ಮಂಡಳಿ ಕಾನೂನು ಬಾಹಿರವಾಗಿ ಈ ಕ್ರಮವನ್ನು ಕೈಗೊಂಡಿದೆ. ಜೊತೆಗೆ ಅಲ್ಲಿಯ ಹಲವಾರು ಸಿಬ್ಬಂದಿಗೆ ಆಡಳಿತ ಮಂಡಳಿಯಿಂದ ಅನ್ಯಾಯವಾಗುತ್ತಿದೆ. ಅದನ್ನು ಕೂಡಲೇ ಸರಿಪಡಿಸಬೇಕೆಂದು ಒತ್ತಾಯಿಸಿದರು.
ಸೋಮವಾರದಿಂದ ಐದು ದಿನಗಳವರೆಗೆ ಕವಿಕಾಶಿ ಸಂಘದ ವತಿಯಿಂದ ಕಿಟೆಲ್ ಕಾಲೇಜಿನ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಆಡಳಿತ ಮಂಡಳಿ ಕೂಡಲೇ ಪ್ರಾಚಾರ್ಯರನ್ನು ಬದಲಾವಣೆ ಮಾಡಿ ಪ್ರಾಧ್ಯಾಪಕ ವಿಕ್ಟರ್ ಅವರನ್ನು ಮರು ನೇಮಿಸಿಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸಂಘದ ಪದಾಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

