ಧಾರವಾಡ

ಅಕ್ಷರ ಜ್ಞಾನ ಅವಶ್ಯ: ದಾಸನಕೊಪ್ಪ

Published On :

ಕಲಘಟಗಿ: ಬದುಕಿನ ಬಂಡಿಯನ್ನು ನೂಕಲು ಅಕ್ಷರ ಜ್ಞಾನ ಮುಖ್ಯ ಎಂದು ಜಿಪಂ ಸದಸ್ಯ ವೈ.ಬಿ. ದಾಸನಕೊಪ್ಪ ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಚಳಮಟ್ಟಿ ಗ್ರಾಮದ ಸ.ಹಿ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಆವರಣದಲ್ಲಿ ತಾಪಂ, ಗ್ರಾಪಂ ಜಿಲ್ಲಾ ಹಾಗೂ ತಾಲೂಕು ಸಾಕ್ಷರ ದೀಪ ಸಮಿತಿಗಳ ಆಶ್ರಯದಲ್ಲಿ ಜರುಗಿದ 48ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಮಾಳಗಿ, ಮುಖ್ಯ ಶಿಕ್ಷಕ ಎಂ.ಎಚ್. ಭಜಂತ್ರಿ, ಸಂಯೋಜಕ ಎಸ್.ಆರ್. ರಾಚಣ್ಣವರ ಮಾತನಾಡಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಆರ್. ವೀರಕ ಅಧ್ಯಕ್ಷತೆ ವಹಿಸಿದ್ದರು. ಉಗ್ನಿಕೇರಿ ಗ್ರಾಪಂ ಅಧ್ಯಕ್ಷೆ ದ್ಯಾಮವ್ವ ಮಾಳಗಿ ಉದ್ಘಾಟಿಸಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಎಂ.ಎನ್. ಕಾಟಕರ ರಚಿತ ಸಾಕ್ಷರತಾ ನಾಟಕವನ್ನು ಶಾಲಾ ಮಕ್ಕಳು ಪ್ರದರ್ಶಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ದೈಹಿಕ ಪರಿವೀಕ್ಷಕ ಎಸ್.ಎಂ. ಮಕ್ಕಣ್ಣವರ, ಎಸ್ಡಿಎಂಸಿ ಅಧ್ಯಕ್ಷ ಎನ್.ಡಿ. ಚಿಕ್ಕಮಠ, ನಾರಾಯಣ ಹುಬ್ಬಳ್ಳಿ, ಮುಖ್ಯೋಪಾಧ್ಯಾಯ ಆರ್.ಆರ್. ಕುಂದನಗಾರ ಇದ್ದರು. ಎಂ.ಎಚ್. ಭಜಂತ್ರಿ ಸ್ವಾಗತಿಸಿದರು. ಕೆ.ಬಿ. ಗುಡಿಮನಿ ನಿರೂಪಿಸಿದರು.  ಆರ್.ವೈ. ಪಾಟೀಲ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.