ಧಾರವಾಡ

ಬೇಡಿಕೆ ಈಡೇರಿಸುವ ಭರವಸೆ: ಪ್ರತಿಭಟನೆ ಹಿಂದಕ್ಕೆ

Published On :

ಧಾರವಾಡ: ಪ್ರಾಚಾರ್ಯರ ಬದಲಾವಣೆ ಹಾಗೂ ಆಡಳಿತ ಮಂಡಳಿಯ ವಿರುದ್ಧ ಕವಿಕಾಶಿ ಸಂಘದ ನೇತೃತ್ವದಲ್ಲಿ ಕಳೆದ ಹಲವು ದಿನಗಳಿಂದ ಕಿಟೆಲ್ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಶುಕ್ರವಾರ ತೆರೆಬಿದ್ದಿದೆ.
ಕಾಲೇಜಿನ ಪ್ರಾಚಾರ್ಯರಾದ ಸುಶಾಂತಿ ಪ್ರಸನ್‌ಕುಮಾರ ಬದಲಾಗಿ ಹಿರಿಯ ಪ್ರಾಧ್ಯಾಪಕ ಡಾ. ಐ.ಜಿ. ಪಾಟೀಲ ಅವರನ್ನು ಪ್ರಾಚಾರ್ಯರನ್ನಾಗಿ ಹಾಗೂ ಅಮಾನತಿನಲ್ಲಿದ್ದ ಡಾ. ಜಿ.ಆರ್. ವಿಕ್ಟರ್ ಅವರನ್ನು ಮರಳಿ ಸೇವೆಗೆ ನೇಮಕ ಮಾಡಿಕೊಂಡ ಹಿನ್ನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಂಘದ ಸದಸ್ಯರು ಪ್ರತಿಭಟನೆ ಹಿಂಪಡೆದರು.
ಇದಕ್ಕೂ ಮೊದಲು ಕಿಟೆಲ್ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಶಿವಾನಂದ ಕಾಪಸೆ ಭೇಟಿ ನೀಡಿ, ವಿದ್ಯಾರ್ಥಿಗಳ ಎಲ್ಲ ಬೇಡಿಕೆಗಳನ್ನು ಆಡಳಿತ ಮಂಡಳಿ ಈಡೇರಿಸಲು ಮುಂದಾಗಿದೆ. ಉನ್ನ್ನತ ಶಿಕ್ಷಣ ಸಚಿವಾಲಯದಿಂದ ಆದೇಶಗಳು ಬಂದಿದ್ದು, ಪ್ರತಿಭಟನ್ನೆ ಹಿಂಪಡೆಯಬೇಕು ಎಂದು ಮನವಿ ಮಾಡಿದರು. ಬೇಡಿಕೆ ಈಡೇರಿದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಇದಕ್ಕೂ ಮುನ್ನ ಕಿಟಲ್ ಕಾಲೇಜು ಆಡಳಿತ ಮಂಡಳಿ ಪರವಾಗಿ ಬಿಷಪ್ ನಿರಂಜನಕುಮಾರ ಅವರು ಕವಿಕಾಶಿ ಸಂಘ ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಯವರಿಗೆ ಪತ್ರ ಸಲ್ಲಿಸಿದರು. ನಂತರ ಈ ಕುರಿತು ಕೆಲ ಕಾಲ ಪ್ರಮುಖರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚರ್ಚೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಸವರಾಜ ಹೊರಟ್ಟಿ ಬೆಂಬಲ ವ್ಯಕ್ತಪಡಿಸಿದರು.
ಹುಡಾ ಮಾಜಿ ಅಧ್ಯಕ್ಷ ರಾಜಾ ದೇಸಾಯಿ, ಹನುಮಂತ ಕೊಟಬಾಗಿ, ಸಂಘದ ಅಧ್ಯಕ್ಷ ಡಾ. ಎನ್.ಬಿ. ಸಂಗಾಪುರ, ಡಾ. ಡಿ.ಎಂ. ಹಿರೇಮಠ, ಡಾ. ಎಂ.ಬಿ. ಹೊರಕೇರಿ, ಸಂಗಮನಾಥ ಲೋಕಾಪುರ, ಡಾ. ಹೆಗ್ಗನ್ನವರ, ಜಂಟಿ ನಿರ್ದೇಶಕ ಡಾ. ದೇವಾನಂದ ಗಾಂವಕರ ಸೇರಿದಂತೆ ಸಂಘದ ಸದಸ್ಯರು, ವಿದ್ಯಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.