ಧಾರವಾಡ

ಶೋಕೇಸ್-2 ಕಾರ್ಯಕ್ರಮ

Published On :

ಧಾರವಾಡ: ನಗರದ ಜೆಎಸ್‌ಎಸ್ ಮಂಜುನಾಥೇಶ್ವರ ಸ್ನ್ನಾತಕ ಮತ್ತು ಸ್ನ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಸೆ. 21ರಂದು ಹುಬ್ಬಳ್ಳಿ-ಧಾರವಾಡ ಪಿಯುಸಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಶೋಕೇಸ್-2 ಎಂಬ ಕಾರ್ಯಕ್ರಮ್ನ ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಬುದ್ಧಿಮತ್ತೆ, ಚಾಣಾಕ್ಷತನ, ತೋರ್ಪಡಿಸುವ ದಿಮಾಕ ಕಿ ಬತ್ತಿ ಜಲಾವ್, ಚಲಾವೋ ಅಪನಿ ಚಾಲ್, ವೀಲ್ ಆಫ್ ಪಾರ್ಚೂನ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ನ ವಜ್ರಕುಮಾರ ಉದ್ಘಾಟಿಸಲಿದ್ದು, ಪ್ರಾಚಾರ್ಯ ಡಾ. ಅಜಿತ ಪ್ರಸಾದ ಅಧ್ಯಕ್ಷತೆ ವಹಿಸುವರು.
23ರಂದು ಕ್ರೀಡಾ ಸ್ಪರ್ಧೆ
ಧಾರವಾಡ: ಹಿರಿಯ ನಾಗರಿಕರ ದಿನಾಚರಣೆ ಹಿನ್ನ್ನೆಲೆಯಲ್ಲಿ ಸೆ. 23ರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡಾಸ್ಪರ್ಧ್ನೆ ಏರ್ಪಡಿಸಲಾಗಿದೆ. ಆಸಕ್ತರು ಸ್ವಂತ ವೆಚ್ಚದಲ್ಲಿ ಭಾಗವಹಿಸಬೇಕು. ಮಾಹಿತಿಗೆ ಧಾರವಾಡ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕಚೇರಿ (0836-2435743) ಸಂಪರ್ಕಿಸಲು ಕೋರಲಾಗಿದೆ.
ಅಧಿಕಾರ ಗ್ರಹಣ
ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳ ಅಧಿಕಾರ ಗ್ರಹಣ ಕಾರ್ಯಕ್ರಮ ನಗರದ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಸೆ. 22ರಂದು ಸಂಜೆ 4.30ಕ್ಕೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕರಾದ ವೀರಭದ್ರಪ್ಪ ಹಾಲಹರವಿ, ಸೀಮಾ ಮಸೂತಿ ಪಾಲ್ಗೊಳ್ಳುವರು.
ಕಾರು ಡಿಕ್ಕಿ: ಓರ್ವ ಸಾವು
ಧಾರವಾಡ: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು, ಒಬ್ಬರು  ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಹೊಸತೇಗೂರ ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಶಿಗ್ಗಾಂವಿ ತಾಲೂಕು ಚಂದಾಪುರ ಗ್ರಾಮದ ಬಸವರಾಜ ಷಣ್ಮುಖಪ್ಪ ಎಲಿ (30) ಗಂಭೀರವೈ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವಿಗೀಡಾಗಿದ್ದಾರೆ. ಅದೇ ಗ್ರಾಮದ ದೇವೇಂದ್ರಪ್ಪ ಹೊಸಗೌಡರ, ವಿರೂಪಾಕ್ಷಪ್ಪ ಬ್ರಹ್ಮಶೆಟ್ಟರ್, ಗುರುಸಿದ್ದಪ್ಪ ಮತ್ತು ಮಾಲತೇಶ ಗಾಯಗೊಂಡಿದ್ದಾರೆ. ಅವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಶಿರಡಿ ಸಾಯಿಬಾಬಾ ದರ್ಶನಕ್ಕೆ ಸ್ವಿಫ್ಟ್ ಕಾರಿನಲ್ಲಿ (ಕೆಎ-27, ಎಂ-4552) ತೆರಳಿದ್ದ ಇವರು ಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಡಿಎಸ್‌ಪಿ ರಾಜು ಬನಹಟ್ಟಿ, ಗ್ರಾಮೀಣ ಸಿಪಿಐ ರಾಮನಗೌಡ ಹಟ್ಟಿ ಮತ್ತು ಗರಗ ಠಾಣೆ ಪಿಎಸ್‌ಐ ಟಿ. ವೆಂಕಟಸ್ವಾಮಿ ಭೇಟಿ ನೀಡಿದ್ದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.