ಧಾರವಾಡ

ಸಂಸ್ಕೃತ ಭಾಷೆ ಗ್ರಾಮೀಣ ಭಾಗಕ್ಕೂ ಪಸರಿಸಲಿ

Published On :

ಧಾರವಾಡ: ಸಂಸ್ಕೃತ ಭಾಷೆ ತನ್ನ ಮಹತ್ವವನ್ನ್ನು ಗ್ರಾಮೀಣ ಮಟ್ಟಕ್ಕೂ ಹೆಚ್ಚಿಸಿಕೊಳ್ಳಬೇಕಾದರೆ ಸಂಸ್ಕೃತ ವಿಶ್ವವಿದ್ಯಾಲಯದ ಮುಖ್ಯಸ್ಥರು ಸಂಸ್ಕೃತ ಪಾಠಶಾಲೆಗಳಿಗೂ ಮೂಲ ಸೌಕರ್ಯ ನೀಡಬೇಕು ಎಂದು ಸವದತ್ತಿ ಶಾಸಕ ಆನಂದ ಮಾಮನಿ ಹೇಳಿದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಮತ್ತು ಬೆಳಗಾವಿ ವಿಭಾಗೀಯ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಸ್ಕೃತೋತ್ಸವ ಕಾರ್ಯಕ್ರಮ್ನ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಅನೇಕ ವಿರೋಧಗಳ ಮಧ್ಯೆಯೂ ಸಂಸ್ಕೃತ ವಿಶ್ವವಿದ್ಯಾಲಯವನ್ನು ಸ್ಥಾಪಿಸಿತ್ತು. ಈ ನಿಟ್ಟಿನಲ್ಲಿ ಇಂದಿನ ರಾಜ್ಯ ಸರ್ಕಾರವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಸಂಸ್ಕೃತ ವಿಷಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
ಕರ್ನಾಟಕ ಸಂಸ್ಕೃತ ಪ್ರಕಾಶನ ಸಮಿತಿ ಸದಸ್ಯ ಪಂ. ಜಯತೀರ್ಥಾಚಾರ್ಯ ಮಳಗಿ ಮಾತನಾಡಿ, ಭಾರತೀಯರ ಸಮಗ್ರ ವಿಕಾಸಕ್ಕೆ ಸಂಸ್ಕೃತ ಭಾಷೆ ತಳಹದಿಯಾಗಿದೆ. ರಾಜ್ಯದ ಎಲ್ಲ ಭಾಷೆಗಳಿಗೂ ಸಮನಾದ ನೆಲೆ ನೀಡಿದ್ದು, ಇಲ್ಲಿ ಸಂಸ್ಕೃತದ ಅಭಿವೃದ್ಧಿ ವಿಸ್ತಾರವಾಗಿದೆ. ಅದರಲ್ಲೂ ಮಧ್ವಾಚಾರ್ಯರು, ಶಂಕರಾಚಾರ್ಯರು ಸಂಸ್ಕೃತದ ಮೂಲಕ ಕರ್ನಾಟಕಕ್ಕೆ ಅದ್ಬುತವಾದ ಕೊಡುಗೆ ನೀಡಿದ್ದಾರೆ ಎಂದರು.
ಸವದತ್ತಿ ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಿ.ಎನ್. ಹೊಸೂರ ಹಾಗೂ ಇನ್ನಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.