ಸಮಗ್ರ ಕೃಷಿ ವಿವಿ ಬಗ್ಗೆ ಸರ್ಕಾರ ಚಿಂತನೆ ನಡೆಸಲಿ
ಧಾರವಾಡ: ಈ ಮುಂಚೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸೇರ್ಪಡೆಯಾಗಿದ್ದ ಸಾಮಾನ್ಯ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಸೇರಿದಂತೆ ಇನ್ನಿತರ ವಿಭಾಗಗಳನ್ನು ಒಳಗೊಂಡ ಕೃಷಿ ವಿಶ್ವವಿದ್ಯಾಲಯಗಳತ್ತ ಸರ್ಕಾರ ಚಿಂತನೆ ಮಾಡಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಲಹೆ ನೀಡಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಕೃಷಿ ಮೇಳ ಉದ್ಘಾಟನೆ ವೇಳೆ ಮಾತನಾಡಿದರು. ಎಲ್ಲ ವಿಭಾಗಗಳನ್ನೂ ಒಳಗೊಂಡ ಕೃಷಿ ವಿವಿಯಿಂದ ರೈತರಿಗೆ ತುಂಬ ಅನುಕೂಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಕೃಷಿಯತ್ತ ಗಮನ ಹರಿಸಬೇಕೆಂದು ಮುಖ್ಯಮಂತ್ರಿಗೆ ಹೊರಟ್ಟಿ ಮನವಿ ಮಾಡಿದರು. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನ ಹೊರತುಪಡಿಸಿ ಉಳಿದೆಲ್ಲ ಉತ್ಪನ್ನಗಳಿಗೆ ನಿರ್ದಿಷ್ಟ ಬೆಲೆ ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಲೆ ನಿಗದಿ ವಿಷಯದಲ್ಲಿ ತಡ ಮಾಡದೆ ನಿರ್ಣಯ ಕೈಗೊಳ್ಳಬೇಕು. ಕೃಷಿ ಅಧಿಕಾರಿಗಳು ರೈತರಿಗೆ ಸರಿಯಾಗಿ ಮಾರ್ಗದರ್ಶನ ಮಾಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಬೆಳೆಸಬೇಕು ಎಂದರು. ಕೃಷಿ ಕಾರ್ಮಿಕರ ತೊಂದರೆಯ ಈ ದಿನಗಳಲ್ಲಿ ಅನ್ನಭಾಗ್ಯ, ಉದ್ಯೋಗ ಖಾತ್ರಿ ಯೋಜನೆಗಳನ್ನು ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸಿವೆ. ಈ ಕಾರಣದಿಂದ ರೈತ ಮೂಲ ಉದ್ಯೋಗ ಕೃಷಿಯನ್ನು ಬದಿಗೆ ಸರಿಸುತ್ತಿದ್ದಾನೆ. ಸರ್ಕಾರಗಳು ಯೋಜನೆಗಳನ್ನು ಕೃಷಿ ಚಟುವಟಿಕೆಗಳಿಗೆ ಧಕ್ಕೆ ತರದಂತೆ ರೂಪಿಸುವುದು ಒಳಿತು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

