ಧಾರವಾಡ

ಫಲಾನುಭವಿಗಳಿಗೆ ಹಣ ಮಂಜೂರಾತಿಗೆ ಆಗ್ರಹ

Published On :

ಧಾರವಾಡ: ತಾಲೂಕಿನಾದ್ಯಂತ ಆಶ್ರಯ ಬಸವ ವಸತಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾದ ಹಣವನ್ನು ಕೂಡಲೇ ಬಿಡುಗಡೆ ಮಾಡಲು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡರನ್ನು ಬಿಜೆಪಿ ಮುಖಂಡರು ಆಗ್ರಹಿಸಿದರು.
ಬುಧವಾರ ನಗರಕ್ಕೆ ಆಗಮಿಸಿದ್ದ ಸದಾನಂದಗೌಡರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, 2010-11ನೇ ಸಾಲಿನಲ್ಲಿ ತಾಲೂಕಿನ 37 ಗ್ರಾಪಂಗಳ ಮುಖಾಂತರ ಆಶ್ರಯ ಬಸವ ವಸತಿ ಯೋಜನೆಗಾಗಿ ಆಯ್ಕೆಯಾದ ಫಲಾನುಭವಿಗಳು ಮನೆ ನಿರ್ಮಿಸಿಕೊಂಡಿದ್ದಾರೆ. ಆದರೆ, ಇದುವರೆಗೂ ಸರ್ಕಾರದಿಂದ ಫಲಾನುಭವಿಗಳಿಗೆ ಯೋಜನೆಯಡಿ ನ್ಯಾಯುತವಾಗಿ ಸಿಗಬೇಕಿದ್ದ ಹಣ ಬಿಡುಗಡೆಯಾಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ಸ್ವೀಕರಿಸಿದ ಸದಾನಂದಗೌಡರು, ಈ ಕುರಿತು ಸಂಬಂಧಿಸಿದವರೊಂದಿಗೆ ಚರ್ಚಿಸಿ ಸೂಕ್ತ ನ್ಯಾಯ ಒದಗಿಸುವ ಭರವಸೆ ನೀಡಿದರು. ಗ್ರಾಪಂ ಸದಸ್ಯ ಭೀಮಪ್ಪ ಕಾಸಾಯಿ ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ಸಿದ್ದು ಕಂಬಾರ, ಮಲ್ಲನಗೌಡ ಪಾಟೀಲ, ಶಂಕರ ದೊಡ್ಡಮನಿ, ನಿಂಗಪ್ಪ ಹೊಂಗಲ, ಕಲ್ಮೇಶ ಹಾದಿಮನಿ, ಬಸವರಾಜ ಕಟಗಿ, ಸಿದ್ದಪ್ಪ ಮುಗಳಿ, ಮಡ್ಡೆಪ್ಪ ಬಾರಕೇರ, ಬಸವರಾಜ ಮುದಕವಿ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.