ಇಂಡಸ್ಟ್ರಿಯಲ್ ಕಾರಿಡಾರ್ ಬಂಡವಾಳ ಹೂಡಿಕೆಗೆ ಚಿಂತನೆ
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ ಸೆ.26
ಮುಂಬೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣಕ್ಕೆ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಬ್ರಿಟಿಷ್ ಸರ್ಕಾರ ಚಿಂಚಿಸುತ್ತಿದೆ ಎಂದು ಗ್ರೇಟ್ ಬ್ರಿಟನ್ ಡೆಪ್ಯೂಟಿ ಹೈಕಮಿಷನರ್ ಇಯಾನ್ ಫೆಲ್ಟಾನ್ ಹೇಳಿದರು.
ದಿ ಇಂಡಸ್ ಎಂಟರ್ಪ್ರೈನರ್ಸ್ ಮತ್ತು ಯುನೈಟೆಡ್ ಕಿಂಗ್ಡಮ್ ಟ್ರೇಡ್ ಆ್ಯಂಡ್ ಇನ್ವೆಸ್ಟ್ಮೆಂಟ್ ಸಹಯೋಗದಲ್ಲಿ 'ಉತ್ತರ ಕರ್ನಾಟಕದಲ್ಲಿ ವಿದೇಶಿ ಬಂಡವಾಳ ಹೂಡಿಕೆ' ಕುರಿತು ಗುರುವಾರ ಆಯೋಜಿಸಿದ್ದ ವಿಚಾರ ಸಂಕಿರಣ ಮತ್ತು ಉದ್ಯಮಿಗಳೊಂದಿಗಿನ ಪ್ರಶ್ನೋತ್ತರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರಗಳ ನಡುವಿನ ದಿಪಕ್ಷೀಯ ಸಹಕಾರ ಮತ್ತು ವ್ಯವಹಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಯೋಜನೆ ಪ್ರಮುಖವಾಗಿದೆ. ಖಾಸಗಿ ಕ್ಷೇತ್ರದ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವ ಈ ಯೋಜನೆಯಲ್ಲಿ ಬಂಡವಾಳ ಹೂಡಿಕೆ ಸಾಧ್ಯಾಸಾಧ್ಯತೆ ಬಗ್ಗೆ ಬ್ರಿಟಿಷ್ ಸರ್ಕಾರ ಚಿಂತಿಸುತ್ತಿದೆ ಎಂದರು.
ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಭಾರತದ ಪ್ರಧಾನಿ ಮನ್ಮೋಹನ್ ಸಿಂಗ್ ಮತ್ತು ಬ್ರಿಟಿಷ್ ಪ್ರಧಾನಿ ಡೆವಿಡ್ ಕ್ಯಾಮರೂನ್ ನಡುವೆ ಮಾತುಕತೆ ನಡೆದಿದೆ ಎಂದರು.
ಗ್ರೇಟ್ ಬ್ರಿಟನ್ನಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಪೂರಕ ವಾತಾವರಣವಿದೆ. ಭಾರತ ಮತ್ತು ಗ್ರೇಟ್ ಬ್ರಿಟನ್ ಮಧ್ಯೆ 2011-12ರಲ್ಲಿ 16,400 ಬಿಲಿಯನ್ ಪೌಂಡ್ ವ್ಯವಹಾರ ನಡೆದಿದ್ದು, ಪ್ರಸಕ್ತ ವರ್ಷದಲ್ಲಿ ವ್ಯವಹಾರದ ಪ್ರಮಾಣ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ. ಭಾರತದಂಥ ಪ್ರಮುಖ ದೇಶಗಳ ಉದ್ಯಮಿಗಳು ಇಂಗ್ಲೆಂಡ್ನಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಬೇಕು. ಬಂಡವಾಳ ಹೂಡಿಕೆ, ಅಥವಾ ರಫ್ತು ವ್ಯವಹಾರಕ್ಕೆ ಬೇಕಾಗುವ ಅಗತ್ಯ ಮಾಹಿತಿ ಮತ್ತು ಪ್ರೋತ್ಸಾಹವನ್ನು ಭಾರತದಲ್ಲಿರುವ ಬ್ರಿಟಿಷ್ ರಾಯಭಾರಿ ಕಚೇರಿ ಒದಗಿಸಲಿದೆ ಎಂದು ಹೇಳಿದರು.
ವೀಸಾ ನೀತಿ ಇನ್ನೂ ಕರಡು ರೂಪದಲ್ಲಿ: ಇಂಗ್ಲೆಂಡ್ನ ನೂತನ ವೀಸಾ ನೀತಿ ಇನ್ನೂ ಕರಡು ರೂಪದಲ್ಲಿದೆ. ನೂತನ ವೀಸಾ ನೀತಿಯಲ್ಲಿ ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಮತ್ತು ಪ್ರವಾಸಿಗಳಿಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ. ಆಂತರಿಕ ಭದ್ರತೆಯನ್ನು ಗಮನದಲ್ಲಿರಿಸಿಕೊಂಡು ಜಾರಿಗೆ ತರಲಾಗುತ್ತಿರುವ ನೂತನ ವೀಸಾ ನೀತಿಯಲ್ಲಿ ಇಂಗ್ಲೆಂಡ್ಗೆ ತೆರಳುವ ಪ್ರವಾಸಿಗ 300 ಡಾಲರ್ ಬಾಂಡ್ ನೀಡಬೇಕಾಗುತ್ತದೆ. ಆದರೆ ಇದು ಇನ್ನೂ ಮಸೂದೆ ಕರಡು ಹಂತದಲ್ಲಿರುವುದರಿಂದ ಮಸೂದೆಯ ಸ್ವರೂಪದ ಬಗ್ಗೆ ಊಹಿಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

