ಧಾರವಾಡ

ಇಂದು ವಿಚಾರ ಸಂಕಿರಣ

Published On :

ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಯ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಮತ್ತು ಇಂಡಿಯನ್ ಜಿಯೋಟೆಕ್ನಿಕಲ್ ಸೊಸೈಟಿ ಸಹಯೋಗದಲ್ಲಿ ಸೆ. 28ರಂದು ಬೆಳಗ್ಗೆ 9.30ಕ್ಕೆ ಬಿವಿಬಿ ಬಯೋಟೆಕ್ನಿಕ್ ಹಾಲ್‌ನಲ್ಲಿ ಜಿಯೋಟೆಕ್ನಿಕಲ್ ಎಂಜಿನಿಯರಿಂಗ್‌ನಲ್ಲಿನ ಸಮಸ್ಯೆಗಳು ಒಂದು ಅಧ್ಯಯನ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.  ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಜಿ.ಸಿ. ತಲ್ಲೂರ ಮತ್ತು ಎಚ್‌ಡಿಬಿಆರ್‌ಟಿಎಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ನೂರ್ ಮನ್ಸೂರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬಿವಿಬಿ ಕಾಲೇಜು ಪ್ರಾಂಶುಪಾಲ ಅಶೋಕ ಶೆಟ್ಟರ್ ಅಧ್ಯಕ್ಷತೆ ವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ವಿಕಲಚೇತನರ ವಿವಾಹಕ್ಕೆ ರು. 50 ಸಾವಿರ ಹೂಡಿಕೆ
ಧಾರವಾಡ: ವಿಕಲಚೇತನ ಯುವಕ,ಯುವತಿಯರನ್ನು ವಿವಾಹವಾಗುವ ಸಾಮಾನ್ಯ ಯುವಕ, ಯುವತಿಯರಿಗೆ ನಿರಂತರ ಮಾಸಿಕ ಆದಾಯ ದೊರಕಿಸಲು ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ ಸರ್ಕಾರ 2013-14ನೇ ಸಾಲಿಗೆ ರು. 50 ಸಾವಿರ ಹೂಡಿಕೆ ರೂಪದಲ್ಲಿ ನೀಡಿ ಪ್ರೋತ್ಸಾಹಿಸಲು ಯೋಜನೆ ಜಾರಿಗೊಳಿಸಿದೆ. ಅಲ್ಲದೆ, ವಿಕಲಚೇತನ ಬಡಕುಟುಂಬದ ದೃಷ್ಟಿಹೀನ ಮಹಿಳೆಯರ ಎರಡು ಹೆರಿಗೆಯವರೆಗೆ ಮತ್ತು ನಂತರದ ಎರಡು ವರ್ಷ ಅವಧಿಗೆ ಆರೋಗ್ಯ ಹಾಗೂ ಪೌಷ್ಟಿಕ ಆಹಾರ ನೀಡುವ ಹಿತದೃಷ್ಟಿಯಿಂದ ವಾರ್ಷಿಕ ಆದಾಯ ರು. 2.50 ಲಕ್ಷಗಳ ಮಿತಿಯೊಳಗಿನವರೆಗೆ ಮಾಸಿಕ ಶಿಶುಪಾಲನಾ ಭತ್ಯೆ ರು. 2 ಸಾವಿರ ನೀಡಲು ಸರ್ಕಾರ ಯೋಜನೆ ಜಾರಿಗೊಳಿಸಿರುತ್ತದೆ. ಇದಲ್ಲದೇ, ವಿಕಲಚೇತನ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ನಂತರದ ಉನ್ನತ ಶಿಕ್ಷಣಗಳಾದ ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ, ಔದ್ಯೋಗಿಕ ಶಿಕ್ಷಣ ಮತ್ತು ಇತರೆ ಯಾವುದೇ ಶಿಕ್ಷಣಕ್ಕೆ ನಿಯಮಾನುಸಾರ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸರ್ಕಾರವು ನಿಗದಿಪಡಿಸಿದ ಪರೀಕ್ಷಾಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕ, ಕ್ರೀಡಾಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿ ಯೋಜನೆ ಸರ್ಕಾರ ಪ್ರಸಕ್ತ ಸಾಲಿಗೆ ಜಾರಿಗೊಳಿಸಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡ ದೂ: 0836-2435749 ಸಂಪರ್ಕಿಸಬಹುದು.
ಅತಿಕ್ರಮಣ: 45 ಜನರ ಮೇಲೆ ದೂರು ದಾಖಲು
ಕಲಘಟಗಿ: ತಾಲೂಕಿನ ಗಂಜೀಗಟ್ಟಿ ಗ್ರಾಮದ ರಿ.ಸ.ನಂ. 99/74, 102, 104ರ ಸರ್ಕಾರಿ ಜಮೀನನ್ನು ಅಕ್ರಮ ಸಾಗುವಳಿ ಮಾಡಿದ 45 ಜನರ ಮೇಲೆ ತಹಸೀಲ್ದಾರ್ ಪೊಲೀಸ್ ಠಾಣೆಗೆ ದೂರು ನೀಡಿ ತೆರೆವುಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಹಲವು ವರ್ಷಗಳಿಂದ ಕಾನೂನು ಬಾಹಿರವಾಗಿ ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡುತ್ತಿರುವ ಕುರಿತು ಸಂಬಂಧಿಸಿದವರಿಗೆ ನೋಟಿಸ್ ನೀಡುತ್ತ ಬಂದಿದ್ದರೂ ಸಾಗುವಳಿ ಮಾಡುತ್ತಲೇ ಬಂದಿದ್ದಾರೆ. ಹೀಗಾಗಿ, ಸರ್ಕಾರಿ ಜಮೀನನ್ನು ರಕ್ಷಿಸಲು ಗ್ರಾಮದ 45ರ ಜನರ ಮೇಲೆ ದೂರು ನೀಡಿ ಕ್ರಮ ಕೈಗೊಂಡಿರುವುದಾಗಿ ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.