ಅ. 3ರಂದು ಕಾರ್ಯಾಗಾರ
ಹುಬ್ಬಳ್ಳಿ: ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಹುಬ್ಬಳ್ಳಿ ಉತ್ತರ ವಲಯ ರೋಟರಿ ಕ್ಲಬ್ ಆಶ್ರಯದಲ್ಲಿ ನಗರದ ಬಿವಿಬಿ ಕಾಲೇಜಿನ ದೇಶಪಾಂಡೆ ಫೌಂಡೇಶನ ಸಭಾಭವನದಲ್ಲಿ ಆ. 3ರಂದು ಕೈಗಾರಿಕೋದ್ಯಮಿಗಳಿಗೆ "ಆಧುನೀಕರಣ ಹಾಗೂ ತಾಂತ್ರಿಕ ಅಭಿವೃದ್ಧಿ" ಎಂಬ ವಿಷಯವಾಗಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಲತೇಶ ಜೀವಣ್ಣವರ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 3ರಂದು ಸಂಜೆ 4.30ಕ್ಕೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕ ಡಾ. ಮಹಾಂತೇಶ ಕರೂರ ಕಾರ್ಯಕ್ರಮ ಉದ್ಘಾಟಿಸುವರು. ಗಣೇಶ ಭಟ್, ವಿಶ್ವನಾಥ ಗೌಡರು ಪಾಲ್ಗೊಳ್ಳುವರು. ಕಾರ್ಯಾಗಾರದಲ್ಲಿ ಉತ್ಪಾದಕತೆಯ ಹೆಚ್ಚಳ, ಕಾರ್ಮಿಕರ ನಿರ್ವಹಣೆ, ಮಾರುಕಟ್ಟೆಯ ತಂತ್ರಗಳು ಹಾಗೂ ಸಿಬ್ಬಂದಿ ಕೌಶಲ್ಯಾಭಿವೃದ್ಧಿ ವಿಷಯವಾಗಿ ಬೆಂಗಳೂರಿನ ಶ್ರೀನಾಥ ಜಿ. ಉಪನ್ಯಾಸ ನೀಡುವರು. 300ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ರೋಟರಿ ಕ್ಲಬ್ ಅಧ್ಯಕ್ಷ ವಿಶ್ವನಾಥ ಗೌಡರ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು. ಜತೆಗೆ ರೋಟರಿ ಕ್ಲಬ್ ರಜತ ಮಹೋತ್ಸವ ಸಂದರ್ಭದಲ್ಲಿ ಸುಮಾರು 25 ಗ್ರಾಮಾಂತರ ಶಾಲೆಗಳಿಗೆ ರು. 10.35 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯಂತ್ರಗಳನ್ನು ವಿತರಿಸಲಾಗುವುದು. ನಾಗರಾಜ ದಿವಟೆ, ಮನೋಹರ, ಸುನೀಲ್ ಮಿರಜಕರ್, ಶಿವಣ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

