ಇಂದು ಗ್ರಂಥ ಬಿಡುಗಡೆ
ಧಾರವಾಡ: ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಸೆ. 29ರಂದು ಸಂಜೆ 5.30ಕ್ಕೆ ಡಾ. ಎ.ಎಸ್. ಕಬ್ಬೂರ ಅವರು ರಚಿಸಿದ ರಾಷ್ಟ್ರೀಯ ಮಹಾಪುರುಷರು ಭಾಗ-1 ಆವೃತ್ತಿ ಗ್ರಂಥ ಬಿಡುಗಡೆ ನಡೆಯಲಿದೆ. ಆಕಾಶವಾಣಿ ನಿರ್ದೇಶಕ ಸಿ.ಯು. ಬೆಳ್ಳಕ್ಕಿ ಬಿಡುಗಡೆಗೊಳಿಸಲಿದ್ದು, ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅಧ್ಯಕ್ಷತೆ ವಹಿಸುವರು. ನ್ಯಾಯವಾದಿ ಬಸವಪ್ರಭು ಹೊಸಕೇರಿ, ಜಯದೇವ ಮೆಣಸಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನಾಳೆ ಯುವಜನೋತ್ಸವ
ಧಾರವಾಡ: ಕರ್ನಾಟಕ ಕಾಲೇಜು ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಪ್ರಥಮ ವಲಯ ಮಟ್ಟದ ಯುವಜನೋತ್ಸವ ಸೆ. 30ರಂದು ಬೆಳಗ್ಗೆ 9.30ಕ್ಕೆ ಕರ್ನಾಟಕ ಕಾಲೇಜಿನ ಪ್ಯಾರನ್ ಹಾಲ್ನಲ್ಲಿ ನಡೆಯಲಿದೆ. ಕವಿವಿ ಕುಲಸಚಿವರಾದ ಡಾ. ಚಂದ್ರಮಾ ಕಣಗಲಿ ಭಾಗವಹಿಸುವರು. ಪ್ರಾಚಾರ್ಯ ಡಾ. ಎಸ್.ಎಸ್. ಕಟ್ಟಿಮನಿ ಅಧ್ಯಕ್ಷತೆ ವಹಿಸುವರು. ಅಕ್ಟೋಬರ್ 1ರ ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಹಾಸ್ಯ ಕಲಾವಿದರಾದ ಡಾ. ಮಹಾದೇವ ಸತ್ತಿಗೇರಿ ಭಾಗವಹಿಸುವರು.
ನಾಳೆ ಸಾಕ್ಷರತಾ ದಿನಾಚರಣೆ
ಧಾರವಾಡ: ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ಸಾಕ್ಷರತಾ ಸ್ವಯಂ ಸೇವಕರ ಸಮಾವೇಶ ಸಮಾರಂಭವು ಸೆ. 30ರಂದು ಬೆಳಗ್ಗೆ 10ಕ್ಕೆ ಇಲ್ಲಿನ ಆರ್ಎಲ್ಎಸ್ ಕಾಲೇಜಿನ ಸಭಾಭವನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಜಿಪಂ ಪ್ರಭಾರಿ ಅಧ್ಯಕ್ಷ ಫಕ್ಕೀರಪ್ಪ ಜಕ್ಕಣ್ಣವರ, ಟಿ.ಜಿ. ಬಾಲಣ್ಣವರ, ಡಾ. ಶ್ರೀಶೈಲ ಹುದ್ದಾರ, ಶಂಕರ ಹಲಗತ್ತಿ ಭಾಗವಹಿಸುವರು.
ಉತ್ತಮ ಶಿಕ್ಷಕಿ ಪ್ರಶಸ್ತಿ
ಧಾರವಾಡ: ನವಲಗುಂದ ತಾಲೂಕಿನ ಶಿರೂರ ಗ್ರಾಮ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂ 2ರಲ್ಲಿ ಸಹ ಶಿಕ್ಷಕಿ ನೂರಜಹಾನ ಹುಲಕೋಟಿ ಅವರಿಗೆ ಪ್ರಸಕ್ತ ಸಾಲಿನ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಉತ್ತಮ ಕಲಿಕಾ ವಿಧಾನ ಹಾಗೂ ಶೈಕ್ಷಣಿಕ ಪ್ರಗತಿ ಮೇ ಕಲಿಕಾ ಉಪಕರಣಗಳೆ ಬಳಕೆಯನ್ನು ಗಮನಿಸಿ, ತಾಲೂಕು ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇತ್ತೀಚಿಗೆ ನವಲಗುಂದದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಪ್ರಶಸ್ತಿ ನೀಡಿ ಗೌರವಿಸಿದರು.
ಉಪನ್ಯಾಸ ಕಾರ್ಯಕ್ರಮ
ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರದ ಪರಿಮಳ ಮಾರ್ಗದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೆ. 29ರಿಂದ ಅ. 3ರ ವರೆಗೆ ಪ್ರತಿದಿನ ಸಂಜೆ 6.30ರಿಂದ 7.30ರವರೆಗೆ 'ಶ್ರೀಮದ್ ಭಾಗವತ'ದ ದಶಮಸ್ಕಂದದ ಕುರಿತು ಪಂ. ಮುಕುಂದಾಚಾರ್ಯ ಹಯಗ್ರೀವ ಅವರಿಂದ ಉಪನ್ಯಾಸ ಜರುಗುವುದು. ಅ. 3ರ ಸಂಜೆ 7.30ರಿಂದ ಸಂಗೀತ ಕಲಾವಿದೆ ಅಮೃತಾ ಉಮರ್ಜಿ ಅವರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

