ಧಾರವಾಡ

ಅಪಘಾತ: ವಿದ್ಯಾರ್ಥಿಗಳಿಗೆ ತರಬೇತಿ ಬೇಕು

Published On :

ಧಾರವಾಡ: ಒಂದೆಡೆ ಕೆಟ್ಟ ರಸ್ತೆಗಳಿಂದ ಅಪಘಾತಗಳು ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಸಂಚಾರಿ ನಿಯಮಗಳನ್ನು ಪಾಲಿಸದಿರುವುದು ಕೂಡ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ ಎಂದು ಎಸ್‌ಡಿಎಂ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ದೇಶಕ ಡಾ. ನಿರಂಜನಕುಮಾರ ಹೇಳಿದರು.
ಅಪಘಾತಗಳು ಸಂಭವಿಸಿದಾಗ ಸ್ಥಳದಲ್ಲಿರುವ ರೋಗಿಗಳ ಆರೈಕೆ, ಅದಕ್ಕಾಗಿ ಯಾರನ್ನು ಸಂರಕ್ಷಿಸಬೇಕು ಮತ್ತು ಎಲ್ಲಿಗೆ, ಹೇಗೆ ಸುರಕ್ಷಿತವಾಗಿ ಸ್ಥಳಾಂತರ ಮಾಡಬೇಕು ಎನ್ನುವ ಕುರಿತು ನರ್ಸ್ ಆ್ಯಂಬುಲನ್ಸ್ ಚಾಲಕ, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಹಾಗೂ ಪಿಜಿ ವೈದ್ಯ ವಿದ್ಯಾರ್ಥಿಗಳಿಗೆ ಕಾಲೇಜು ಮಟ್ಟದಲ್ಲಿಯೇ ತರಬೇತಿ ನೀಡಬೇಕಿದೆ ಎಂದರು.  ಸಮೀಪದ ಡಾ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಇಂಡಿಯನ್ ಅಸೋಸಿಯೇಶನ್ ಆಫ್ ಟ್ರೌಮಾಟಾಲಾಜಿ ಮತ್ತು ಕ್ರಿಟಿಕಲ್ ಕೇರ್ ಹಾಗೂ ಎಸ್‌ಡಿಎಂ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗ ಜಂಟಿಯಾಗಿ ಹಮ್ಮಿಕೊಂಡಿದ್ದ ಟ್ರೌಮಾಸಿಕಾನ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ರಸ್ತೆ ಅಪಘಾತಗಳಿಂದ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸುತ್ತಿದ್ದು, ಅವುಗಳ ಸಮರ್ಪಕ ನಿರ್ವಹಣೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರ ತುರ್ತು ನಿಗಾ ಘಟಕಗಳನ್ನು ಸ್ಥಾಪಿಸುವುದು ಅಗತ್ಯ ಎಂದು ಸಲಹೆ ನೀಡಿದರು. ಸಮಾರಂಭದಲ್ಲಿ ತಜ್ಞ ವೈದ್ಯರಾದ ಡಾ. ಸತೀಶ ಧರ್, ಡಾ. ಸಂಜಯ ಶಹಾ, ಡಾ. ಚಾವಟೆ, ಡಾ. ನರೋಣಾ, ಎಸ್‌ಡಿಎಂ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ದೇಸಾಯಿ, ಡಾ. ಸತ್ಯ ಶಂಕರ್, ಡಾ. ರಾಜಶೇಖರ ಮೋಹನ, ಜೆ.ಕೆ. ಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.