ಧಾರವಾಡ

ಕೇಂದ್ರ ನೀತಿ ಖಂಡಿಸಿ ಪ್ರತಿಭಟನೆ

Published On :

ಹುಬ್ಬಳ್ಳಿ: ಜನಪ್ರತಿನಿಧಿ ಕಾಯ್ದೆಗೆ ಸುಗ್ರೀವಾಜ್ಞೆ ತರಲು ಹೊರಟ ಕೇಂದ್ರ ಯುಪಿಎ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಯುಪಿಎ ಸರ್ಕಾರ ಕಳಂಕಿತ ಜನಪ್ರತಿನಿಧಿಗಳನ್ನು ರಕ್ಷಿಸಲು ಸರ್ವೋಚ್ಚ ನ್ಯಾಯಾಲಯದ ಆಜ್ಞೆಗೆ ವಿರುದ್ಧವಾಗಿ ಸುಗ್ರೀವಾಜ್ಞೆ ತರಲು ಹೊರಟಿರುವುದು ಖಂಡನೀಯ. ರಾಮರಾಜ್ಯದ ಕನಸನ್ನು ಕಂಡ ರಾಷ್ಟ್ರಪಿತರ ಆಸೆಗೆ ವಿರುದ್ಧವಾಗಿ ರಾವಣ, ಕೀಚಕರಂತವರಿಗೆ ಆಳಲು ಅನುಕೂಲ ಮಾಡಿಕೊಡಲು ಹೊರಟ ಕೇಂದ್ರದ ಸರ್ಕಾರದ ಧೋರಣೆ ಸಂವಿಧಾನವನ್ನು ಅಪಹಾಸ್ಯ ಮಾಡಿದಂತಿದೆ. ದೇಶಕ್ಕೆ ಬೇಕಾಗಿರುವುದು ಸಮಗ್ರ ಅಭಿವೃದ್ಧಿ, ಶಾಂತಿ ಹಾಗೂ ಕಟ್ಟ ಕಡೆಯ ಪ್ರಜೆಗೆ ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡುವುದು. ಪ್ರಜಾಪ್ರಭುತ್ವದಡಿ ಆಳುವ ನಾಯಕನೇ ಬೇಕೇ ಹೊರತು ದೇಶವನ್ನು ಕಬಳಿಸಲು ಹೊರಟಿರುವ ಸರ್ವಾಧಿಕಾರಿ ಧೋರಣೆಯ ನಾಯಕರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು, ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ ಹಾಕದಿರಲಿ ಎಂದು ವಿನಂತಿಸಿದರು.
ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಸತೀಶ ಶೆಟ್ಟಿ, ಯಲ್ಲಪ್ಪ ಗಾಯಕವಾಡ, ಮಂಜುನಾಥ ಲೂತಿಮಠ, ಮಲ್ಲಿಕ, ಅಮಿತ, ಸಂಜೀವ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.