2 ತಿಂಗಳಲ್ಲಿ ಕವಿವಿ ವೈಫೈ: ವಾಲಿಕಾರ
ಧಾರವಾಡ: ಇನ್ನೆರಡು ತಿಂಗಳಲ್ಲಿ ಇಡೀ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ವೈಫೈ ಸಂಪರ್ಕ ಒದಗಿಸಲಾಗುವುದು ಎಂದು ಕುಲಪತಿ ಡಾ ಎಚ್.ಬಿ. ವಾಲಿಕಾರ ಹೇಳಿದರು.
ಕವಿವಿ ಸೆನೆಟ್ ಸಭಾಂಗಣದಲ್ಲಿ ಜರುಗಿದ ವಾಣಿಜ್ಯ ವಿಭಾಗದ ವಾಣಿಜ್ಯ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಮಾಹಿತಿ ತಂತ್ರಜ್ಞಾನ ಇಂದು ತ್ವರಿತಗತಿಯಲ್ಲಿ ಬೆಳೆಯುತ್ತಿರುವುದರಿಂದ ಇದರ ಪೂರ್ಣ ಸೌಲಭ್ಯವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಅದಕ್ಕೆ ಬೇಕಾದ ಸೌಲಭ್ಯವನ್ನು ವಿವಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಕ್ಯಾಂಪಸ್ ಪೂರ್ತಿ ವೈಫೈ ಸೌಲಭ್ಯವನ್ನು ಮುಕ್ತವಾಗಿ ಕೊಡಲಾಗುವುದು ಎಂದು ಹೇಳಿದರು.
ಜತೆಗೆ ವೈಫೈ ಸಂಪರ್ಕದ ದೂರುಪಯೋಗ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶ್ವವಿದ್ಯಾಲಯದ ಘನತೆ ಶಿಕ್ಷಕರ ಕಡೆ ಮಾತ್ರವಿಲ್ಲ. ಇದರಲ್ಲಿ ವಿದ್ಯಾರ್ಥಿಗಳ ಪಾಲು ಇರಬೇಕು. ವಿದ್ಯಾರ್ಥಿಗಳು ಗಂಭೀರವಾಗಿ ವಿದ್ಯಾಭ್ಯಾಸದಲ್ಲಿ ತೊಡಗಿಕೊಂಡು ಶ್ರಮ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿಶ್ವವಿದ್ಯಾಲಯದಲ್ಲಿ ಕಲಿಕೆಗೆ ಪೂರಕ ವಾತಾವರಣವಿದ್ದು, ಇಲ್ಲಿ ಪ್ರವೇಶ ಪಡೆದುಕೊಂಡು ಓದುತ್ತಿರುವುದು ನಿಜಕ್ಕೂ ಪುಣ್ಯ ಎಂದರು. ಬರುವ ವರ್ಷ ನಾಲ್ಕು ಸಹ ಪ್ರಾಧ್ಯಾಪಕರನ್ನು ವಾಣಿಜ್ಯ ವಿಭಾಗಕ್ಕೆ ನೇಮಕ ಮಾಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಭಾಗದ ಮುಖ್ಯಸ್ಥ ಪ್ರೊ ಎಸ್.ಎಸ್. ಹೂಗಾರ ಮಾತನಾಡಿದರು. ಪ್ರಾಧ್ಯಾಪಕ ಡಾ ಎ.ಎಸ್. ಶಿರಾಳಶೆಟ್ಟಿ, ವಾಣಿಜ್ಯ ಸಂಘದ ಅಧ್ಯಕ್ಷ ಸತೀಶಕುಮಾರ ಜಂಗೋಡಿ, ಕಾರ್ಯದರ್ಶಿ ನಾಗಶ್ರೀ ಜಡ್ಡಿಪಾಲ್ ಇದ್ದರು. ಮನೀಶ ದೇಶಪಾಂಡೆ ಮತ್ತು ಆರತಿ ರೊಟ್ಟಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

