ಧಾರವಾಡ

ಕೇಂದ್ರದಲ್ಲಿ 3ನೇ ಅವಧಿಗೂ ಯುಪಿಎ ಸರ್ಕಾರ

Published On :

ಧಾರವಾಡ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಡಾ. ಮನಮೋಹನ ಸಿಂಗ್ ಅವರ ನೇತೃತ್ವದಲ್ಲಿ ಕೇಂದ್ರದ ಯುಪಿಎ ಸರ್ಕಾರ ಎರಡು ಅವಧಿ ಯಶಸ್ವಿಯಾಗಿ ಪೂರೈಸಿದ್ದು 3ನೇ ಅವಧಿಗೆ ಮತ್ತೆ ಅಧಿಕಾರದಲ್ಲಿ ಬರಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ 18ನೇ ವಾರ್ಡ್‌ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಜೋಶಿ, 10 ವರ್ಷ ಯಾವ ಅಭಿವೃದ್ಧಿ ಕೆಲಸ ಮಾಡಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದೇ ಪುಕ್ಕಟೆ ಪ್ರಚಾರ ಪಡೆದುಕೊಂಡಿದ್ದಾರೆ. ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ. ಆದ್ದರಿಂದ ಈ ಬಾರಿ ಕಾಂಗ್ರೆಸ್ಸಿಗೆ ಬೆಂಬಲಿಸಿ ಎಂದು ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಎಸ್.ಆರ್. ಮೋರೆ, ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ದೀನ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಜಾತ್ಯತೀತ ಪಕ್ಷವಾಗಿದ್ದು ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಏಕೈಕ ಗುರಿ ಹೊಂದಿದೆ. ವಿನಯ ಕುಲಕರ್ಣಿ ಯುವ ರಾಜಕಾರಣಿಯಾಗಿದ್ದು, ಶಾಸಕರಾಗಿ ಹಲವು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದರು.
ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಆಡಳಿತ ನಡೆಸುವಲ್ಲಿ ಇತಿಹಾಸವನ್ನು ಹೊಂದಿದೆ. ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ನಾನು ಪಕ್ಷವನ್ನು ಗೆಲ್ಲಿಸುವಲ್ಲಿ ಹಗರಲಿರಳು ಶ್ರಮಿಸುತ್ತೇನೆ ಎಂದರು.
ಪಾಲಿಕೆ ಸದಸ್ಯ ಸುಭಾಸ ಶಿಂಧೆ ಮಾತನಾಡಿದರು. ಕೆಪಿಸಿಸಿ ಸದಸ್ಯ ವಸಂತ ಅರ್ಕಾಚಾರ್,  ಬಸವರಾಜ ಮಟ್ಟಿ, ದೀಪಕ ಚಿಂಚೋರೆ, ರಾಬರ್ಟ್ ದದ್ದಾಪುರಿ, ತಾನಾಜಿರಾವ್ ಪುಂಡೆ, ವಿನಾಯಕ ಕಟಗಿ, ವೆಂಕಟೇಶ ರಾಯ್ಕರ, ಎಂ.ಎಂ. ಮುಲ್ಲಾ, ಶಾಂತವ್ವ ಗುಜ್ಜಳ, ಶಿವಪ್ಪ ಮಲಕಾರಿ, ಎಸ್.ಎಸ್. ಹಿರೇಮನಿ, ಜಾನಾಬ ಹೊಸಪೇಟ, ಪುಟ್ಟು ತಿವಾರಿ, ಸಲೀಂ ಖಾನ್ ಪಠಾಣ, ಅಶೋಕ ತುರಾಯಿದಾರ ಇದ್ದರು. ವಾರ್ಡ್ 16ರ ಲಕ್ಷ್ಮೀಸಿಂಗನಕೆರೆಯಲ್ಲಿ ವಿನಯ ಕುಲಕರ್ಣಿ ಪಾದಯಾತ್ರೆ ಮಾಡಿ ಪ್ರಚಾರ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.