ಬಿಜೆಪಿಯಿಂದ ನೃಪತುಂಗ ಬೆಟ್ಟದಲ್ಲಿ ಪ್ರಚಾರ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಏ. 1
ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ತಮ್ಮ ಬೆಂಬಲಿಗರೊಂದಿಗೆ ಸೋಮವಾರ ನಗರದ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಿದರು.
ಬೆಳಗ್ಗೆ ನೃಪತುಂಗಬೆಟ್ಟದಲ್ಲಿ ಪ್ರಚಾರ ನಡೆಸಿದ ಬಿಜೆಪಿ ಮುಖಂಡರು, ವ್ಯಾಯಾಮ ಹಾಗೂ ವಾಯು ವಿಹಾರದಲ್ಲಿ ನಿರತರಿಂದ ಮತ ಯಾಚಿಸಿದರು.
ನಂತರ ಭವಾನಿ ನಗರದ ಮನೆಯೊಂದರಲ್ಲಿ ಸಭೆ ನಡೆಸಿ, ಮತ ಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಅವರು ಮಾತನಾಡಿ, ಈ ಹಿಂದಿನ ಎನ್ಡಿಎ ಸರ್ಕಾರದ ಸಾಧನೆ, ಧಾರವಾಡ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಭ್ರಷ್ಟಾಚಾರ ಹಾಗೂ ನರೇಂದ್ರ ಮೋದಿ ಪ್ರಧಾನಿಯಾಗುವ ಅವಶ್ಯಕತೆ ಬಗ್ಗೆ ಮಾತನಾಡಿದರು.
ಮಾಜಿ ಮೇಯರ್ ವೀರಣ್ಣ ಸವಡಿ, ಬಿಜೆಪಿ ಮುಖಂಡರಾದ ನಾಗೇಶ ಕಲಬುರ್ಗಿ, ಪ್ರಶಾಂತ ಹಾವಣಗಿ, ದತ್ತಮೂರ್ತಿ ಕುಲಕರ್ಣಿ, ಹನುಮಂತ ಡಂಬಳ, ವಸಂತ ನಾಡಜೋಶಿ, ಸದು ಚರಂತಿಮಠ, ಸಂಜಯ ಕುಲಕರ್ಣಿ, ಪ್ರಶಾಂತ ಜೋಶಿ, ಗೋವಿಂದ ನಾಯರ, ಸುರೇಶ ಹಾವಣಗಿ, ಜಗದೀಶ ಗೋಣಿ, ಗುರು ಕುಲಕರ್ಣಿ, ಸಂತೋಶ ಮೊಹಿತೆ, ದ್ಯಾಮಣ್ಣ ಕೆರೂರ, ಸಂಧ್ಯಾ ದಿಕ್ಷೀತ್, ಲಕ್ಷ್ಮಿ ಕುಲಕರ್ಣಿ, ದೀಪಾ ಹಾವಣಿಗಿ, ಭಾರತಿ ಬಿಜಾಪುರ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

