ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪಣ
ಅಣ್ಣಿಗೇರಿ: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಜರುಗಿತು.
ಮುಖಂಡ ದ್ಯಾಮಣ್ಣ ಕೊಗ್ಗಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅನೇಕ ಧಾರವಾಡ ಲೋಕಸಭೆ ಅಭ್ಯರ್ಥಿ ವಿನಯ ಕುಲಕರ್ಣಿ ಅವರನ್ನು ಅಭೂತ ಪೂರ್ವ ಗೆಲುವು ತಂದುಕೊಡಲು ಒಗ್ಗಟ್ಟಿನಿಂದ ಶ್ರಮಿಸುವುದಕ್ಕೆ ಸಂಕಲ್ಪಗೈಯಲಾಯಿತು. ಅಲ್ಲದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಶ್ರೀಸಾಮಾನ್ಯರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರ ಮನವೊಲಿಸಬೇಕೆಂದು ಸಭೆಯಲ್ಲಿ ಪಾಲ್ಗೊಂಡಿದ್ದ ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದರು.
ಮತದಾರರನ್ನು ದಾರಿತಪ್ಪಿಸಲು ವಿವಿಧ ಪಕ್ಷಗಳು ಯತ್ನಿಸುತ್ತಿದ್ದ ಈ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕಾಗಿರುವ ಬಗ್ಗೆಯೂ ವಿಸ್ತೃತವಾಗಿ ಸಭೆಯಲ್ಲಿ ಚರ್ಚಿಸಲಾಯಿತು. ಪ್ರವೀಣ ನಾವಳ್ಳಿ, ಶಂಕ್ರಪ್ಪ ಕುರಿ, ಈಶ್ವರಪ್ಪ ಕಾಳಪ್ಪನವರ ನಿಂಗಪ್ಪ ಬಡೆಪ್ಪನವರ, ಲಿಂಗರಾಜ ಕುಲಕರ್ಣಿ, ಶಿವಣ್ಣ ಬಾಳೋಜಿ, ಮಡಿವಾಳಪ್ಪ ಬಳ್ಳೊಳ್ಳಿ, ಡಿ.ಎಲ್. ಆಡಕಾವು, ಪ್ರಲ್ಹಾದ ಬೆಳದಲಿ, ಕೃಷ್ಣಪ್ಪ ಬೆಂತೂರ, ಪ್ರಕಾಶ ಬಳ್ಳೊಳ್ಳಿ ಮತ್ತಿತರರು ಉಪಸ್ಥಿತರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

