ಕಾನೂನು ಅರಿವು ಅಗತ್ಯ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಏ. 7
ಪ್ರತಿಯೊಬ್ಬರಲ್ಲಿ ಕಾನೂನು ಅರಿವು ಮೂಡಿದಾಗ ಮಾತ್ರ ಕಾನೂನಿನ ನೆರವು ಪಡೆಯಬಹುದು ಎಂದು ಹಿರಿಯ ನ್ಯಾಯವಾದಿ ಎಂ.ಜಿ. ಮಾಳವಾದೆ ಹೇಳಿದರು.
ಕೆಎಲ್ಇ ಸಂಸ್ಥೆಯ ಕಾಡಸಿದ್ದೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಚ್ಎಸ್ ಕೋತಂಬ್ರಿ ವಿಜ್ಞಾನ ಸಂಸ್ಥೆ ಮತ್ತು ಗುರುಸಿದ್ದಪ್ಪ ಕಾನೂನು ಮಹಾವಿದ್ಯಾಲಯದ ಸಹಯೋಗದೊಂದಿಗೆ ಸೋಮವಾರ ಆಯೋಜಿಸಿದ್ದ ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪ್ರತಿಯೊಂದು ಕಾನೂನುಗಳ ಬಗೆಗೆ ಮಾಹಿತಿ ಹೊಂದಿರಬೇಕು ಎಂದ ಅವರು, ಮಕ್ಕಳು ಮತ್ತು ಮಹಿಳೆಯರ ಮೇಲೆ ಜರುಗುತ್ತಿರುವ ಕಾನೂನು ಉಲ್ಲಂಘನೆಗಳನ್ನು ಉದಾಹರಣೆಗಳ ಮೂಲಕ ವಿವರಿಸಿದರು. ಕೌಟುಂಬಿಕ ನ್ಯಾಯ, ಗ್ರಾಹಕ ಮತ್ತು ಪರಿಸರ ಮಾಲಿನ್ಯ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.
ಅತಿಥಿಯಾಗಿದ್ದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಶಾರದಾ ಪಾಟೀಲ ಮಾತನಾಡಿ, ಕಾನೂನು ಪಾಲನೆಯಿಂದ ಪ್ರತಿಯೊಬ್ಬರಿಗೂ ನೆಮ್ಮದಿ ದೊರಕುತ್ತದೆ. ಮೊಬೈಲ್, ಇಂಟರ್ನೆಟ್, ಇ-ಮೇಲ್, ಫೇಸ್ ಬುಕ್ ಮೂಲಕ ಹೆಚ್ಚಿನ ಅಪರಾಧಗಳು ಜರುಗುತ್ತಿದ್ದು, ಈ ದಿಸೆಯಲ್ಲಿ ವಿದ್ಯಾರ್ಥಿಗಳು ಜಾಗೃತಿ ವಹಿಸಿ ಕಾನೂನು ಪರಿಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಚಾರ್ಯ ಪ್ರೊ. ಎಂ.ಬಿ. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಇದರ ಪ್ರಯೋಜನ ಪಡೆದು ಜ್ಞಾನ್ನ ಹೆಚ್ಚಿಸಿಕೊಳ್ಳಬೇಕು ಎಂದರು.
ಪ್ರೊ. ಎಸ್.ಎಂ. ಹುಲ್ಲೂರ, ಡಾ. ಬಿ.ಬಿ. ಹುಲಮನಿ, ಪ್ರೊ. ಎಸ್.ಎಸ್. ಹನಗವಾಡಿಮಠ, ಡಾ. ವಿಜಯಶ್ರೀ ಹಿರೇಮಠ, ಡಾ. ವಿ.ಜಿ. ರಜಪೂತ, ಪ್ರೊ. ಆರ್.ಎಸ್. ಮಿಟ್ಟಿಮನಿ, ಸಿ.ಜೆ. ಜಾಡರ, ಶೋಭಾ ಲೋಹಾರ ಮತ್ತಿತರರಿದ್ದರು.
ಡಾ. ಆರ್.ಎಫ್. ಇಂಚಲ ಪ್ರಾಸ್ಥಾವಿಕವಾಗಿ ಮಾತನಾಡಿದರು. ಆರತಿ ಪಾಟೀಲ ಪ್ರಾರ್ಥಸಿದರು. ಗ್ರಂಥಪಾಲಕ ಬಿ.ಎಸ್.ಮಾಳವಾಡ ನಿರೂಪಿಸಿದರು. ಡಾ. ಎಸ್.ಕೆ. ಪಾಟೀಲ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

