ಪ್ರಹ್ಲಾದ ಜೋಶಿ ಪರ ಡಾ. ಕೋರೆ ಪ್ರಚಾರ
ಧಾರವಾಡ: ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಬುಧವಾರ ನಗರದ ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಪರ ಮತಯಾಚಿಸಿದರು.
ಕ್ಲಾಸಿಕ್ ತರಬೇತಿ ಕೇಂದ್ರ, ಕೆಎಲ್ಇ ಸಂಸ್ಥೆಯ ಮೃತ್ಯುಂಜಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಹಂಚಿನಮನಿ ಶಿಕ್ಷಣ ಸಂಸ್ಥೆ, ಆರ್ಎಲ್ಎಸ್ ಶಿಕ್ಷಣ ಸಂಸ್ಥೆಗಳ ಜೊತೆಗೆ ಕರ್ನಾಟಕ ಕಾಲೇಜು, ಜೆಎಸ್ಸೆಸ್ ಡಂಬಳ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪ್ರಹ್ಲಾದ ಜೋಶಿಗೆ ಮತ ನೀಡುವಂತೆ ಮನವಿ ಮಾಡಿದರು.ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾದರೆ ಭಾರತದ ಆರ್ಥಿಕಾಭಿವೃದ್ಧಿ ಜೊತೆಗೆ ಶೈಕ್ಷಣಿಕ ರಂಗದಲ್ಲಿ ಬದಲಾವಣೆ ತರಲಿದ್ದಾರೆ. ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಯುವಶಕ್ತಿ ಅವಶ್ಯ. ಮೋದಿ ಕನಸಿನ 'ಏಕ್ ಭಾರತ ಶ್ರೇಷ್ಠ' ಭಾರತ್ ಘೋಷಣೆ ಸಾಕಾರವಾಗಬೇಕಾದರೆ ಪ್ರಜ್ಞಾವಂತರು ಮತ ಚಲಾಯಿಸಿ ದೇಶದ ಭದ್ರತೆಗೆ ಅಡಿಪಾಯ ಹಾಕಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೋಹನ ಲಿಂಬಿಕಾಯಿ, ಶಂಕರಣ್ಣ ಮುನವಳ್ಳಿ, ಲಕ್ಷ್ಮಣ ಉಪ್ಪಾರ, ಸುನೀಲ ಸರೂರ, ಮೋಹನ ರಾಮದುರ್ಗ, ಸಂತೋಷ ದೇವರಡ್ಡಿ, ಸಿದ್ದು ಕಲ್ಯಾಣಶೆಟ್ಟಿ, ಭೀಮು ಸವನೂರ, ಸುನಿಲ ಮೋರೆ, ರಾಕೇಶ ದೊಡಮನಿ, ಹರೀಶ ಮನಕವಾಡ, ಶ್ರೀನಿವಾಸ ಸುರೇಶ ಖರಾಡೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

