ರೈತ ಸೇನೆಯ ಮತದಾರ ಜಾಗೃತಿ
ನವಲಗುಂದ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ 18 ಪ್ರಶ್ನೆಗಳನ್ನು ಕೇಳಿ ಮತ ಚಲಾಯಿಸಬೇಕು ಎಂದು ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
ರೈತ ಸೇನಾ ನೇತೃತ್ವದಲ್ಲಿ ಆಯೋಜಿಸಿದ್ದ ಮತದಾರ ಜಾಗೃತಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಮಹದಾಯಿ ನ್ಯಾಯಾಧಿಕರಣದಿಂದ ಮಧ್ಯಂತರ ಆದೇಶ ಪಡೆಯುವಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ಮಹದಾಯಿ ನದಿ ನೀರಿನ ಸಮರ್ಪಕ ಹಂಚಿಕೆ, ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಇತ್ಯಾದಿ ಪ್ರಶ್ನೆಗಳನ್ನು ಮತದಾರರು ಅಭ್ಯರ್ಥಿಗಳಿಗೆ ಕೇಳಬೇಕು ಎಂದು ಹೇಳಿದರು.
ತಾಲೂಕು ಅಧ್ಯಕ್ಷ ಸಿ.ಎಸ್. ನವಲಗುಂದ, ಕ್ಷೇತ್ರದ ಮತದಾರರು ಬರುವ ಏ. 17ರಂದು ನಡೆಯುವ ಚುನಾವಣೆಯಲ್ಲಿ ಹಣ, ಹೆಂಡದ ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸುವಂತೆ ಮತದಾರಲ್ಲಿ ಮನವಿ ಮಾಡಿದರು. ರೈತ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಂಕ್ರಪ್ಪ ಅಂಬಲಿ, ಶರಣಪ್ಪಗೌಡ ಪಾಟೀಲ, ಹನುಮಂತ ಸವದತ್ತಿ, ಶ್ರುತಿ ಮೆಣಸಿನಕಾಯಿ, ಮಲ್ಲಿಕಾರ್ಜುನಪ್ಪ ಸಂಗನಗೌಡರ, ಆನಂದ ಹಳ್ಯಾಳ, ಅಪ್ಪೇಶ ಚುಳಕಿ, ಸಯ್ಯದ್ ನದಾಫ, ಗಂಗನಗೌಡ ತೋಟದ, ಶಿವಯ್ಯ ಪೂಜಾರ, ಶಂಕ್ರಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

