3,399 ಪ್ರಕರಣ ಇತ್ಯರ್ಥ
ಕನ್ನಡಪ್ರಭ ವಾರ್ತೆ, ಧಾರವಾಡ, ಏ. 20
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡ ಮೆಗಾ ಲೋಕ ಅದಾಲತ್‌ನಲ್ಲಿ 3,399 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಎ.ವಿ. ಶ್ರೀನಾಥ ಹೇಳಿದ್ದಾರೆ.
ಪ್ರಕಟಣೆ ಮೂಲಕ ತಿಳಿಸಿದ ಅವರು, ಕಳೆದ ಜನವರಿ 6ರಿಂದ ಏಪ್ರಿಲ್ 12ರ ವರೆಗೆ 2ನೇ ರಾಷ್ಟ್ರೀಯ (ಮೆಗಾ) ಲೋಕ ಅದಾಲತ್‌ನ್ನು ಜಿಲ್ಲಾದ್ಯಂತ ನಡೆಸಲಾಗಿತ್ತು. ಮೆಗಾ ಲೋಕ ದಾಲತ್‌ನಲ್ಲಿ ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಪುರಸಭೆ, ಪಂಚಾಯತಿ, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಮತ್ತು ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳು ಹಾಗೂ ರಾಜಿ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ಇತ್ಯರ್ಥ ಮಾಡಲಾಗಿದೆ. ಮೋಟಾರ್ ವಾಹನ ಅಪಘಾತ ಪ್ರಕರಣಗಳಲ್ಲಿ ರು. 1,17,64,500 ಪರಿಹಾರ ನೀಡಲು ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

