ಕುಂಬ್ರಿಜಡ್ಡಿ ಅರಣ್ಯ ಭೂಮಿಗೆ ಭೇಟಿ
ಕನ್ನಡಪ್ರಭ ವಾರ್ತೆ, ಶಿರಸಿ, ಏ. 20
ಯಲ್ಲಾಪುರ ತಾಲೂಕು ಕಂಪ್ಲಿ ಗ್ರಾಪಂ ವ್ಯಾಪ್ತಿಯ ಕುಂಬ್ರಿಜಡ್ಡಿ ಅರಣ್ಯ ಸರ್ವೇ ನಂಬರ್ 86ರಲ್ಲಿ ಫಕೀರಪ್ಪ ಎಂಬುವವರು ಅತಿಕ್ರಮಿಸಿರುವರೆನ್ನಲಾದ ಅರಣ್ಯ ಒತ್ತುವರಿ ಭೂಮಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಒಕ್ಕಲೆಬ್ಬಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ಅತಿಕ್ರಮಣದಾರ ಹೋರಾಟಗಾರರ ವೇದಿಕೆ ಅಧ್ಯಕ್ಷ ಎ. ರವೀಂದ್ರ ನಾಯ್ಕ ನೇತೃತ್ವದ ತಂಡ ಭಾನುವಾರ ಸ್ಥಳಕ್ಕೆ ಭೇಟಿ ನೀಡಿದೆ ಎಂದು ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ಮಾಡಿದ ಜಿಲ್ಲಾ ಅರಣ್ಯ ಅತಿಕ್ರಮಣದಾರರ ಹೋರಾಟಗಾರರ ವೇದಿಕೆಯು ಅರಣ್ಯ ಸಂರಕ್ಷಣಾಧಿಕಾರಿಗೆ ತಕ್ಷಣ ಸ್ಥಳ ಪರಿಶೀಲನೆ ಮಾಡಿ ಅರಣ್ಯ ಅತಿಕ್ರಮಣದಾರನ್ನು ಅರಣ್ಯ ಅತಿಕ್ರಮಿಸಿರುವ ಕುರಿತು ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ತನಿಖೆ ಜರುಗಿಸುವ ದಿಸೆಯಲ್ಲಿ ಕ್ರಮ ಜರುಗಿಸಿ ಎಂದು ಆಗ್ರಹಿಸಿದೆ.
ತನಿಖೆಗೆ ಆಗ್ರಹ: ಅರಣ್ಯ ಹಕ್ಕು ಕಾಯಿದೆ ಮಂಜೂರಿ ಪ್ರಕ್ರಿಯೆ ಚಾಲನೆ ಇರುವಂಥ ಸಂದರ್ಭದಲ್ಲಿ ಅರಣ್ಯ ಅತಿಕ್ರಮಣದಾರರ ಹಿತಾಸಕ್ತಿಗೆ ಅರಣ್ಯ ಅಧಿಕಾರಿಗಳು ಆತಂಕ ಉಂಟುಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲದ್ದರಿಂದ ಸದ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ವೇದಿಕೆ ಅಭಿಪ್ರಾಯ ವ್ಯಕ್ತಪಡಿಸಿದೆ.
ಅತಿಕ್ರಮಣದಾರರು ಅರಣ್ಯ ಅಧಿಕಾರಿ ಮೇಲೆ ಆರೋಪಿಸಿರುವ ಅಮಾನವೀಯ ದೌರ್ಜನ್ಯದ ಆರೋಪದ ಕುರಿತು ಜಿಲ್ಲಾದ್ಯಂತ ಅರಣ್ಯ ಅತಿಕ್ರಮಣದಾರರು ಆತಂಕಕ್ಕೆ ಒಳಪಟ್ಟಿರುವುದರಿಂದ ಸದ್ರಿ ಆರೋಪದ ಕುರಿತಂತೆ ಉನ್ನತ ಮಟ್ಟದ ತನಿಖೆಯಾಗಿ ಕ್ರಮ ಜರುಗಿಸಲು ಉತ್ತರ ಕನ್ನಡ ಜಿಲ್ಲಾ ಅರಣ್ಯ ಅತಿಕ್ರಮಣದಾರ ಹೋರಾಟಗಾರರ ವೇದಿಕೆ ಅಧ್ಯಕ್ಷ ಎ. ರವೀಂದ್ರ ನಾಯ್ಕ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

