ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಹುಬ್ಬಳ್ಳಿ: ಕಳೆದ ನಾಲ್ಕು ತಿಂಗಳಿನಿಂದ ಕೆಲಸವಿಲ್ಲದೇ ಮನೆಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಉದ್ಯೋಗಕ್ಕೆ ಸೇರಿಕೊಳ್ಳಿ ಎಂದು ಹೇಳುತ್ತಾಳೆ ಎಂಬ ಆತಂಕದಿಂದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕುರಿತು ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಳೇ ಹುಬ್ಬಳ್ಳಿ ನೇಕಾರ ನಗರದ ಶ್ರೀಕಾಂತ ಬಸವಂತಪ್ಪ ಡೊಂಗರಸಾಣಿ ಎಂಬ ವ್ಯಕ್ತಿ ನಿರುದ್ಯೋಗಿಯಾಗಿ ಮನೆಯಲ್ಲಿ ಇದ್ದ ಕಾರಣ ಪತ್ನಿ ಪೂಜಾ ಅವರು ಉದ್ಯೋಗಕ್ಕೆ ಸೇರಿಕೊಳ್ಳಿ ಮನೆ ನಡೆಸುವುದು ಕಷ್ಟವಾಗುತ್ತಿದೆ ಎಂದು ಪದೇ ಪದೆ ಹೇಳುತ್ತಿದ್ದರು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಪೂಜಾ ತನ್ನ ಅಕ್ಕನ ಮನೆಗೆ ಹೋಗಿದ್ದು, ಶುಕ್ರವಾರ ಮರಳುತ್ತಿದ್ದೇನೆ ಎಂದು ಪತಿ ಶ್ರೀಕಾಂತಗೆ ದೂರವಾಣಿ ಮುಖಾಂತರ ತಿಳಿಸಿದ್ದರು. ಮನೆಗೆ ಮರಳಿದ ನಂತರ ಮತ್ತೆ ಕೆಲಸಕ್ಕೆ ಹೋಗು ಎಂದು ಹೇಳುತ್ತಾಳೆ ಎಂದು ಶ್ರೀಕಾಂತ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಸಬಾಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

