ಧಾರವಾಡ

ಶಿಲ್ಪಾ ಸಾವು: ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಗೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಏ. 26
ಮಂಡ್ಯ ಜಿಲ್ಲೆ ಮಳವಳ್ಳಿಯ ಶಿಲ್ಪಾ ಸಾವಿಗೆ ಕಾರಣರಾದ ಆರೋಪಿಗಳಿಗೆ ಉಗ್ರ ಶಿಕ್ಷೆ ಹಾಗೂ ಪಾವಗಡ ತಾಲೂಕಿನ ಹೆಣ್ಣು ಮಕ್ಕಳ ಮಾರಾಟ ಪ್ರಕರಣದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಐಎಂಎಸ್ಸೆಸ್ ಜಿಲ್ಲಾ ಸಮಿತಿಯಿಂದ ಶನಿವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿಲ್ಪಾ ಸಾವಿನ ಘಟನೆಯನ್ನು ಕೂಡಲೇ ತನಿಖೆಗೊಳಪಡಿಸಿ ತಪ್ಪಿತಸ್ಥರನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ಇಂತಹ ಅಮಾನವೀಯ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
ಮಳವಳ್ಳಿ ತಾಲೂಕಿನ ಶಿಲ್ಪಾ ಹಾಗು ಅಭಿಜಿತ್ ಪೋಷಕರ ಒಪ್ಪಿಗೆ ಪಡೆಯದೆ ಅಂತರಜಾತಿ ವಿವಾಹವಾದರೆಂಬ ಕಾರಣಕ್ಕೆ ಅಭಿಜಿತ್ನ ಚಿಕ್ಕಮ್ಮ  ಪ್ರಮೀಳಾ ಹಾಗೂ ಚಿಕ್ಕಪ್ಪ ಪುಟ್ಟಸ್ವಾಮಿ ಸೇರಿ ಶಿಲ್ಪಾಳನ್ನು ಸಜೀವವಾಗಿ ದಹಿಸಿದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.
ಪಾವಗಡ ತಾಲೂಕಿನಲ್ಲಿ ಹೆಣ್ಣು ಮಕ್ಕಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ವರದಿಯಾಗಿದ್ದು, ಕಳೆದ ಎರಡು ವರ್ಷಗಳಲ್ಲಿ 13ಕ್ಕೂ ಹೆಚ್ಚು ನವಜಾತ ಶಿಶುಗಳ ಮಾರಾಟವಾಗಿವೆ. ತಾಲೂಕಿನ ಶ್ರೀರಂಗ ಪುರ ತಾಂಡಾ, ಉಪ್ಪಾರಹಳ್ಳಿ ತಾಂಡಾ, ಗುಂಡ್ಲ ಹಳ್ಳಿ, ಕ್ಯಾತಗಾನಕೆರೆ ತಾಂಡಾ, ಹೊಸಹಳ್ಳಿ ತಾಂಡಾ ಇತ್ಯಾದಿ ಸ್ಥಳಗಳಲ್ಲಿ ಈ ಸಮಸ್ಯೆ ಕಂಡು ಬಂದಿದ್ದು ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ ಮನವಿಯನ್ನು ಮುಖ್ಯಮಂತ್ರಿಗಳಿಗೆ ಅರ್ಪಿಸಲಾಯಿತು.
ಸಮಿತಿ ಜಿಲ್ಲಾ ಅಧ್ಯಕ್ಷ ಎ.ಭುವನಾ, ಪ್ರಭಾವತಿ ಗೂಗಲ್, ಸದಸ್ಯ ಶಶಿಕಲಾ ಪಾಟೀಲ್, ಕಸ್ತೂರಿ ಭೀರಪ್ಪನವರ, ರೇಣುಕಾ ಧರಿಯಣ್ಣವರ ಮತ್ತಿತರರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.