ರಾಮದೇವ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಏ. 27
ಯೋಗ ಗುರು ರಾಮದೇವ್ ಬಾಬಾ ದಲಿತರ ಹಾಗೂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಧಾರವಾಡ ಲೋಕಸಭೆ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ದುರ್ಗದಬೈಲ್ ಸರ್ಕಲ್ನಲ್ಲಿ ಯೋಗಗುರು ರಾಮದೇವರ ಭಾವಚಿತ್ರಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಂತರ ಪ್ರತಿಕೃತಿ ದಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶ್ಪಾಕ ಕುಮಟಾಕರ, ಡೋಂಗಿ ಬಾಬಾ ರಾಮದೇವ್ ಬಿಜೆಪಿ ಏಜೆಂಟ್ರಾಗಿ ದಲಿತರ ಹಾಗೂ ಮಹಿಳೆಯರ ವಿರುದ್ಧ ಹೇಳಿಕೆ ನೀಡುವ ಮೂಲಕ ಇಡೀ ಮಹಿಳಾ ಸಮಾಜವನ್ನು ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಮುದಾಯಕ್ಕೆ ಅವಮಾನವಾಗುವಂತೆ ಹೇಳಿಕೆ ನೀಡಿರುವ ರಾಮದೇವರ ಅವರನ್ನು ಕೇಂದ್ರ ಸರ್ಕಾರ ಗಡಿಪಾರು ಮಾಡುವ ಮೂಲಕ ದೇಶದ ಸಂಸ್ಕೃತಿ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಯೋಗಾನಂದ, ಪ್ರವೀಣ ಶಲವಡಿ, ಶಶಿಶೇಖರ ಡಂಗನವರ, ರಾಘವೇಂದ್ರ ಜಿ.ಎನ್., ಶ್ರೀಧರ ವಡೇಕರ, ಆನಂದ ಮುಗದಮ್, ಅಬ್ದುಲ್ಗಣಿ ಬಂಕಾಪುರ, ಉಮೇಶ ಭೂಸನೂರ, ಅನಿಲ ಹಾನಗಲ್, ನವೀನಕುಮಾರ, ಅಕ್ಷಯಕುಮಾರ, ಜಾಯಿಸ್ ರತ್ನಂ, ಪರಶುರಾಮ ಗಡಾದ, ಭರತ , ಮುತ್ತು ಹಿರೇಮಠ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

