ಧಾರವಾಡ

ಬ್ಯಾಡಗಿಯಲ್ಲಿ ಇಂದು ಕೃಷಿ ಮೇಳ

Published On :

ಬ್ಯಾಡಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸರ್ಕಾರದ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಫೆ. 3ರಂದು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿದ್ಧತೆ ನಡೆದಿದೆ.
ಕ್ರೀಡಾಂಗಣದ ಮಧ್ಯಭಾಗದಲ್ಲಿ ಮುಖ್ಯವೇದಿಕೆ ನಿರ್ಮಿಸಲಾಗಿದ್ದು 2 ಸಾವಿರ ಪ್ರೇಕ್ಷಕರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಮುಖ್ಯವೇದಿಕೆಯ ಸುಮಾರು 100 ಮೀ ಅಂತರದಲ್ಲಿ ಸುಮಾರು 50ಕ್ಕೂ ಹೆಚ್ಚು ಮಾರಾಟ ಮಳಿಗೆಯನ್ನು ನಿರ್ಮಿಸಲಾಗಿದೆ.
ಉತ್ಸವದಲ್ಲಿ ಕೃಷಿ ಪಂಡಿತರು, ಚಿಂತಕರು ಮತ್ತು ಸಾಧಕರಿಗೆ ಸನ್ಮಾನಿಸಲಾಗುವುದು. ಮೇಳದಲ್ಲಿ 4 ಕೃಷಿಗೋಷ್ಠಿಗಳು, ಮಾರಾಟ ಮಳಿಗೆ, ಜಾನುವಾರು ಪ್ರದರ್ಶನ ಸೇರಿದಂತೆ ಇನ್ನಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉತ್ಸವದಲ್ಲಿ ಬೀಜ, ಗೊಬ್ಬರ ಸೇರಿದಂತೆ ಇನ್ನಿತರ ಮಾರಾಟ ಮಳಿಗೆಗಳಿಗೆ ಅವಕಾಶ ಮಾಡಿಕೊಡಲಾಗಿದೆ.
ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಹೇಮಣ್ಣ ಬಾರಂಗಿ ಸೇರಿದಂತೆ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಸನ್ಮಾನಿಸಲಾಗುವುದು. ಮಿಶ್ರತಳಿ, ಜೋಡಿ ಎತ್ತು, ನಾಟಿ ತಳಿ ಸಂರಕ್ಷಣೆ ದೃಷ್ಟಿಯಿಂದ ಜಾನುವಾರು ಪ್ರದರ್ಶನ ನಡೆಸಲಾಗುವುದು. ಜರ್ಸಿ, ಎಚ್‌ಎಫ್ ಕರುಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಉತ್ತಮ ಜಾನುವಾರಿಗೆ ನಗದು ಬಹುಮಾನ ನೀಡಲಾಗುವುದು. ಸಾವಿರಾರು ರೈತರು ಸೇರುವ ನಿರೀಕ್ಷೆಯಿದ್ದು ಎಲ್ಲರಿಗೂ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ತಂತ್ರಜ್ಞಾನದ ತಿಳಿವಳಿಕೆ ನೀಡುವ ಮೂಲಕ ಕೃಷಿಯಿಂದ ವಿಮುಖವಾಗುತ್ತಿರುವ ರೈತರನ್ನು ಮತ್ತೆ ಮುಖ್ಯವಾಹಿನಿಗೆ ತರುವುದು ಕೃಷಿಮೇಳದ ಉದ್ದೇಶವಾಗಿದೆ ಎಂದು ಮೇಳದ ಉಸ್ತುವಾರಿ ಹೊತ್ತಿರುವ ತಹಸೀಲ್ದಾರ್ ಶಿವಶಂಕರ ನಾಯಕ್ ತಿಳಿಸಿದರು.
ಕೃಷಿಸಚಿವ ಕೃಷ್ಣ ಬೈರೇಗೌಡ ಕೃಷಿಮೇಳ ಉದ್ಘಾಟಿಸಲಿದ್ದು, ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಇನ್ನಿತರರು ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.