ಬಿ.ಇಡಿ. ದಾಖಲಾತಿ: ಅಭ್ಯರ್ಥಿಗಳಿಗೆ ಸೂಚನೆ
ಧಾರವಾಡ: ಪ್ರಸಕ್ತ ಶೈಕ್ಷಣಿಕ ವರ್ಷದ ಬಿ.ಇಡಿ. ವ್ಯಾಸಂಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೊದಲ ಹಂತದ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಪ್ರಸ್ತುತ ಬೆಂಗಳೂರಿನ ಕೇಂದ್ರೀಕೃತ ವಿಶೇಷ ದಾಖಲಾತಿ ಘಟಕವು ಜ. 29ರಂದು ಪ್ರಕಟಿಸಿರುವ ಮರು ಹಂಚಿಕಾ ಪಟ್ಟಿಯನ್ನು ಡಯಟ್ ಕಚೇರಿಯ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಬಿ.ಇಡಿ. ದಾಖಲಾತಿ ಪ್ರವೇಶಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳನ್ನು ಫೆ. 1ರೊಳಗೆ ಪರಿಶೀಲನೆಗೆ ಸಲ್ಲಿಸಬೇಕು. ಮೂಲ ಪ್ರಮಾಣ ಪತ್ರಗಳ ಪರಿಶೀಲನೆ ನಂತರ ತಮಗೆ ನೀಡಲಾದ ಬಿ.ಇಡಿ. ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ನಿಗದಿತ ಶುಲ್ಕವನ್ನು ಬ್ಯಾಂಕ್ ಮೂಲಕ ಭರಣ ಮಾಡಿ ಅದೇ ದಿನ ಡಯಟ್ ಕಚೇರಿಯಿಂದ ದಾಖಲಾತಿ ಪತ್ರ ಪಡೆದುಕೊಂಡು ತಮಗೆ ಸೂಚಿತ ಬಿ.ಇಡಿ. ಕಾಲೇಜಿನಲ್ಲಿ ವ್ಯಾಸಂಗಕ್ಕೆ ಹಾಜರಾಗಲು ಸೂಚಿಸಿದೆ. ಮಾಹಿತಿಗೆ ಡಯಟ್ ಕಚೇರಿ ಸಂಪರ್ಕಿಸಬಹುದು ಎಂದು ಡಯಟ್ ಪ್ರಾಚಾರ್ಯ ಗಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಮಾಹಿತಿ ಆಂದೋಲನ
ಕಲಘಟಗಿ: ಕೃಷಿ ಇಲಾಖೆ ವತಿಯಿಂದ ಫೆ. 8ರಂದು ಸ್ಥಳೀಯ ಎಪಿಎಂಸಿ ಆವರಣದಲ್ಲಿ ಬೆಳಗ್ಗೆ 11ಕ್ಕೆ ತಾಲೂಕು ಮಟ್ಟದ ಕೃಷಿ ಮಾಹಿತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ಶಾಸಕ ಸಂತೋಷ ಲಾಡ್ ಉದ್ಘಾಟನೆ ನೆರವೇರಿಸಲಿದ್ದು, ಸಂಸದ ಪ್ರಹ್ಲಾದ ಜೋಶಿ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ನಾಗರಾಜ ಛಬ್ಬಿ, ಜಿಪಂ ಅಧ್ಯಕ್ಷ ಎಸ್.ಸಿ. ಅಗಡಿ, ಸದಸ್ಯರಾದ ವೈ. ಬಿ. ದಾಸನಕೊಪ್ಪ, ಬಸವರಾಜ ಕರಡಿಕೊಪ್ಪ, ಕಸ್ತೂರಿ ಧಾರವಾಡ, ತಾಪಂ ಅಧ್ಯಕ್ಷ ಎಂ.ಎಫ್. ಜಾವೂರ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕ ಪ್ರದೀಪ ಕವಟೇಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಟಗರಿನ ಕಾಳಗ
ಗದಗ: ಬೆಟಗೇರಿ ಗೆಳೆಯರ ಬಳಗದ ವತಿಯಿಂದ ಶ್ರೀರಂಗಪ್ಪಜ್ಜನ ಮಠದ 85ನೇ ಜಾತ್ರಾ ಮಹೋತ್ಸವದ ನಿಮಿತ್ತ ಫೆ. 3ರಂದು ಬೆಳಗ್ಗೆ 10ಕ್ಕೆ ಶ್ರೀಮಠದ ಅವರಣದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗ ನಡೆಯಲಿದೆ. ಸಂಸದ ಶಿವಕುಮಾರ ಉದಾಸಿ ಉದ್ಘಾಟಿಸುವರು. ಬೂದಪ್ಪ ಮಜ್ಜಗಿ ಅಧ್ಯಕ್ಷತೆ ವಹಿಸುವರು. ನಗರಸಭೆ ಸದಸ್ಯ ಶ್ರೀನಿವಾಸ ಕರಿ, ರಾಘವೇಂದ್ರ ಯಳವತ್ತಿ, ಮಂಜುನಾಥ ಮುಳಗುಂದ, ನಾಗಲಿಂಗ ಐಲಿ ಮುಂತಾದವರು ಆಗಮಿಸುವರು ಎಂದು ಸಂಘಟಿಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

