ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಪತ್ರ
ಹುಬ್ಬಳ್ಳಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಅರೆಕುರಹಟ್ಟಿ, ಹೆಬ್ಬಾಳ, ಹೆಬಸೂರ ಗ್ರಾಮಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಸಂಸದ ಪ್ರಹ್ಲಾದ ಜೋಶಿ ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಅವರಿಗೆ ಪತ್ರ ಬರೆದಿದ್ದಾರೆ.
ಈಗಾಗಲೇ ಅಣ್ಣಿಗೇರಿ ಎಪಿಎಂಸಿ ಕಾರ್ಯಕ್ಷೇತ್ರದಲ್ಲಿ ನವಲಗುಂದ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ 2013- 14ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಆದರೆ ಪ್ರಸಕ್ತ ಸಾಲಿನಲ್ಲಿ ನವಲಗುಂದ ತಾಲೂಕಿನಾದ್ಯಂತ ಸುಮಾರು ರು. 20 ಸಾವಿರ ಹೆಕ್ಟೇರ್ ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಇದರಿಂದ 7 ಹಾಗೂ 8 ಲಕ್ಷ ಕ್ವಿಂಟಾಲ್ ಮೆಕ್ಕೆಜೋಳ ಉತ್ಪಾದನೆಯಾಗುವ ನಿರೀಕ್ಷೆ ಇದೆ. ಜಿಲ್ಲಾಡಳಿತ ಕೇವಲ 2-3 ಖರೀದಿ ಕೇಂದ್ರಗಳಿಂದ ಮುಂದಿನ ದಿನಮಾನದಲ್ಲಿ ಇಷ್ಟೊಂದು ಪ್ರಮಾಣದ ಮೆಕ್ಕೆಜೋಳ ಖರೀದಿಸುವುದು ಕಷ್ಟಸಾಧ್ಯವಾಗುವುದು. ಅಲ್ಲದೇ ತಾಲೂಕಿನಾದ್ಯಂತ ಮೆಕ್ಕೆಜೋಶ ಬೆಳೆದ ರೈತರಿಗೆ ನವಲಗುಂದ ಉಪ ಮಾರುಕಟ್ಟೆ ಪ್ರಾಂಗಣಕ್ಕೆ ತಮ್ಮ ಹುಟ್ಟುವಳಿಯನ್ನು ಮಾರಾಟ ಮಾಡುವುದು ಕಷ್ಟವಾಗುತ್ತದೆ. ಹೀಗಾಗಿ ನವಲಗುಂದ ತಾಲೂಕಿನ ಅರೆಕುರಹಟ್ಟಿ, ಹೆಬ್ಬಾಳ ಮತ್ತು ಹೆಬಸೂರ ಗ್ರಾಮಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಖರೀದಿ ಕೇಂದ್ರ ಪ್ರಾರಂಭಿಸಲು ಅಗತ್ಯ ಸಿಬ್ಬಂದಿ ಕೂಡಲೇ ನೇಮಿಸಿಕೊಳ್ಳಬೇಕೆಂದು ಜೋಶಿ ತಿಳಿಸಿದ್ದಾರೆ.
ಏತ ನೀರಾವರಿ ಯೋಜನೆಗೆ ಅನುಮೋದನೆ
ನವಲಗುಂದ: ತಾಲೂಕಿನ ಅಳಗವಾಡಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರಕಿದೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ತಿಳಿಸಿದ್ದಾರೆ. ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಕೋನರೆಡ್ಡಿ ಪ್ರಸ್ತಾಪಿಸಿದ ಈ ವಿಷಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಉತ್ತರಿಸಿದ್ದಾರೆ.
ಗೊಬ್ಬರಗುಂಪಿ, ಅಮರಗೋಳ, ಹದ್ಲಿಗಂಗಾಪೂರ, ಮದಗುಣಕಿ ಹಾಗೂ ಮಾದನೂರ ಸೇರಿದಂತೆ ಒಟ್ಟು 5 ಏತ ನೀರಾವರಿ ಯೋಜನೆಗಳಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಬೇಕಾಗುವ ರು. 56.98 ಕೋಟಿ ಮೊತ್ತ ಕುರಿತಂತೆಯೂ 2013ರ ಸೆಪ್ಟೆಂಬರ್ 17ರಂದು ಜರುಗಿದ ಕರ್ನಾಟಕ ನೀರಾವರಿ ನಿಗಮದ ತಾಂತ್ರಿಕ ಸಲಹಾ ಸಮಿತಿಯಲ್ಲಿಯೂ ಪರಿಶೀಲಿಸಲಾಗಿದೆ ಎಂದೂ ಸಚಿವರು ವಿವರಿಸಿದ್ದಾರೆ.
ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಅಂತಿಮಗೊಳಿಸಿ ಐದು ಯೋಜನೆಗಳಿಗೆ ಅವಶ್ಯಕ ಅನುದಾನ ಒದಗಿಸಿ ಶೀಫ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದೂ ಸಚಿವ ಪಾಟೀಲ ಭರವಸೆ ನೀಡಿದ್ದಾರೆ ಎಂದೂ ಕೋನರೆಡ್ಡಿ ಪ್ರಕರಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

