ಮೃತ್ಯುಂಜಯ-ಮಹಾಂತ ಪ್ರಶಸ್ತಿ ಪ್ರದಾನ
ಕನ್ನಡಪ್ರಭ ವಾರ್ತೆ, ಧಾರವಾಡ, ಫೆ. 3
ಮುರುಘಾಮಠದ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರ ಮುಂಡರಗಿಯ ಡಾ. ಅನ್ನದಾನೀಶ್ವರ ಸ್ವಾಮೀಜಿ, ಮರೆಗುದ್ದಿಯ ನಿರುಪಾದೀಶ ಸ್ವಾಮೀಜಿ, ಇನ್‌ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಹಾಗೂ ಬಸವಕಲ್ಯಾಣದ ಸಿದ್ಧರಾಮೇಶ್ವರ ಶರಣರಿಗೆ ಮೃತ್ಯುಂಜಯ-ಮಹಾಂತ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸುಧಾ ಮೂರ್ತಿ, ಆಡುವ ನುಡಿ, ಮಾಡುವ ಕೆಲಸದಲ್ಲಿ ಶುದ್ಧತೆ ಇದ್ದರೆ ಆ ಬದುಕು ಎಂದಿಗೂ ಸುಂದರ. ಇತಿಹಾಸ ಓದಿ ಪಂಡಿತರಾಗುವುದು ದೊಡ್ಡದಲ್ಲ. ಇತಿಹಾಸ ಸೃಷ್ಟಿಸುವುದು ದೊಡ್ಡದು. ಆ ನಿಟ್ಟಿನಲ್ಲಿ ತಂದೆ-ತಾಯಿ ಮಕ್ಕಳನ್ನು ಬೆಳೆಸಬೇಕು ಎಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿದ ಡಾ. ಅನ್ನದಾನೀಶ್ವರ ಮಹಾಸ್ವಾಮಿಗಳು, ಭಾವಪರವಶದಲ್ಲಿ ಸಾಹಿತ್ಯ ಕೃಷಿ ಮಾಡಿದ ಕವಿಗಳಿಗೆ ಮಾತ್ರ ಜ್ಞಾನಪೀಠ ಪ್ರಶಸ್ತಿ ಕೊಡುವ ಪದ್ಧತಿ ತಪ್ಪಬೇಕು. ಸಾಮಾನ್ಯನನ್ನು ಅಸಾಮಾನ್ಯ ಸ್ಥಿತಿಗೆ ಒಯ್ಯುವ ಶರಣ ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಕೊಡುವ ಪದ್ಧತಿ ಜಾರಿಯಾಗಬೇಕು ಎಂದು ಅಭಿಪ್ರಾಯಿಸಿದರು.
ಶರಣ ಸಾಹಿತ್ಯದ ಕೊರತೆಯಿಂದ ಇಂದು ದೇಶದಲ್ಲಿ ಭಯೋತ್ಪಾದನೆ, ಅತ್ಯಾಚಾರದಂತಹ ಅನಾಚಾರಗಳು ನಡೆಯುತ್ತಿವೆ ಎಂದು ವಿಷಾದಿಸಿದರು. ಇದೇ ಸಂದರ್ಭದಲ್ಲಿ ಅಖಿಲ ಭಾರತ ಶಿವಾನುಭವ ಸಂಸ್ಥೆಯ 71ನೇ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ನಿಡಸೋಸಿ ಮಠದ ಜಗದ್ಗುರು ಪಂಚಮ ಶವಲಿಂಗೇಶ್ವರ ಮಹಾಸ್ವಾಮಿಗಳು, ಮೋಹನ ಲಿಂಬಿಕಾಯಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

