ಕೃಷಿ ವಿವಿ ಕುಲಪತಿ ಡಾ. ಬಿರಾದಾರ ಪದಗ್ರಹಣ
ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿರುವ ಕೃಷಿ ವಿಜ್ಞಾನಿ ಡಾ. ಡಿ.ಪಿ. ಬಿರಾದಾರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಮೂಲತಃ ಬಿಜಾಪುರ ಜಿಲ್ಲೆಯ ದೋಣಿಹಾಳದ ಡಾ. ಬಿರಾದಾರ ಅವರು, ಧಾರವಾಡ ಕೃಷಿ ವಿವಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ್ದು, 1993ರಲ್ಲಿ ಅಮೆರಿಕದ ಇಲಿನಾಯಿಸ್ ವಿಶ್ವವಿದ್ಯಾಲಯ ಅನುವಂಶಿಕತೆ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಪಿಎಚ್ಡಿ ಪದವಿ ಪ್ರದಾನ ಮಾಡಿದೆ.
1984ರಲ್ಲಿ ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಬೇಸಾಯ ಶಾಸ್ತ್ರದಲ್ಲಿ ಬೋಧಕರಾಗಿ ನೇಮಕಗೊಂಡು 1988 ರಿಂದ 1995ರವರೆಗೆ ಸಹಾಯಕ ಪ್ರಾಧ್ಯಾಪಕರಾಗಿ, 1995ರಿಂದ 1999ರ ಅವಧಿಯಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. 1999ರಲ್ಲಿ ಪ್ರಾಧ್ಯಾಪಕರಾಗಿ ನೇಮಕಗೊಂಡು ಶಿರಗುಪ್ಪ ಕೃಷಿ ಸಂಶೋಧನಾ ಕೇಂದ್ರದಲ್ಲಿ 2004ರ ವರೆಗೆ ಸೇವೆ ಸಲ್ಲಿಸಿದ್ದಾರೆ. 2004ರಿಂದ 2006ರವರೆಗೆ ಬಿಜಾಪುರ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
2006ರಿಂದ ಕೃಷಿ ವಿವಿ ಪ್ರಕಟಣಾ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯ ಮಾಡಿದ್ದಾರೆ. ಸಹ ವಿಸ್ತರಣಾ ನಿರ್ದೇಶಕ ಹುದ್ದೆಯನ್ನೂ ನಿರ್ವಹಿಸಿದ್ದಾರೆ. 2012ರಲ್ಲಿ ರಾಯಚೂರು ಕೃಷಿ ವಿಶ್ವ ವಿದ್ಯಾಲಯದ ಕುಲಸಚಿವರಾಗಿ ನೇಮಕಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

