ದ್ವಂದ್ವಾರ್ಥ ಚಿತ್ರಗಳಿಗೆ ಕಡಿವಾಣ ಬೀಳಲಿ: ಸಿಎಂ
ಧಾರವಾಡ: ಕ್ರೌರ್ಯದ ವೈಭವೀಕರಣ, ದ್ವಂದ್ವಾರ್ಥ ಸಂಭಾಷಣೆಗಳಿಗೆ ಕಡಿವಾಣ ಹಾಕಿ ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಚಿತ್ರಗಳನ್ನು ಕನ್ನಡ ಚಲನಚಿತ್ರರಂಗ ನಿರ್ಮಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಧಾರವಾಡದಲ್ಲಿ ಭಾನುವಾರ ಸಂಜೆ ಕೆಸಿಡಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 2010 ಮತ್ತು 2011ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಚಲನಚಿತ್ರರಂಗ ಸಮಾಜದ ಮೇಲೆ ದಟ್ಟ ಪರಿಣಾಮ ಬೀರುವಂತಹ ಮಾಧ್ಯಮವಾಗಿದ್ದು, ಹಿಂದಿನ ಕಾಲದಲ್ಲಿ ಬರುತ್ತಿದ್ದ ಚಿತ್ರಗಳು ಸಮಾಜದ ಸಾಮಾಜಿಕ, ನೈತಿಕ ನೆಲೆಗಟ್ಟಿಗೆ ಪೂರಕವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ನಿರ್ಮಾಣವಾಗಿರುವ ಕೆಲವು ಚಿತ್ರಗಳನ್ನು ನೋಡಿದಾಗ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ರೀತಿಯಲ್ಲಿ ಕನ್ನಡ ಚಿತ್ರಗಳು ಮೂಡಿಬರುತ್ತಿವೆ. ಕನ್ನಡ ಚಿತ್ರರಂಗಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ. ಈ ಮೊದಲು 75 ಚಿತ್ರಗಳಿಗೆ ಸರ್ಕಾರದಿಂದ 10 ಲಕ್ಷ ನೆರವು ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತ್ತು ಕಳೆದ ಬಜೆಟ್ನಲ್ಲಿ ಕನ್ನಡ ಚಿತ್ರಗಳಿಗೆ ನೀಡುವ ಸಹಾಯಧನವನ್ನು 75ರಿಂದ 100 ಚಿತ್ರಗಳಿಗೆ ಹೆಚ್ಚಿಸಲಾಗಿದೆ. ಕನ್ನಡದಲ್ಲಿ ನಿರ್ಮಾಣವಾಗುವ ಎಲ್ಲ ಚಿತ್ರಗಳು ಉತ್ತಮವಾಗಿ ಬರಬೇಕು. ಜನರ ಮೆಚ್ಚುಗೆ ಗಳಿಸಬೇಕು. ಉತ್ತಮ ಸಮಾಜ ರೂಪಿಸುವುದಕ್ಕೆ ಪೂರಕವಾಗಿರಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

