ಖರೀದಿ ಕೇಂದ್ರ ತೆರೆಯಲು ಜೋಶಿ ಪತ್ರ
ಹುಬ್ಬಳ್ಳಿ: ಜಿಲ್ಲೆಯಾದ್ಯಂತ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ಸಂಸದ ಪ್ರಹ್ಲಾದ ಜೋಶಿ ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಕಡಲೆ ಬೆಳೆಯಲಾಗಿದೆ. ನವಲಗುಂದ ತಾಲೂಕಿನಾದ್ಯಂತ ಅಂದಾಜು 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಉತ್ಪಾದನೆಯಾಗುವ ನಿರೀಕ್ಷೆಯಿದೆ. ಕಡಲೆ ಬಿತ್ತಿದ ರೈತರು ಕಡಲೆ ಒಕ್ಕಲಿಯನ್ನು ಪ್ರಾರಂಭಿಸಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಮಾರುಕಟ್ಟೆಗೆ ಕಡಲೆ ಹುಟ್ಟುವಳಿ ಹೆಚ್ಚಿನ ಪ್ರಮಾಣದಲ್ಲಿ ಆವಕವಾಗಲಿದೆ. ಪ್ರಸ್ತುತ ಕಡಲೆಗೆ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ಗೆ ರು. 2 ಸಾವಿರದಿಂದ ರು. 2,600 ವರೆಗೆ ಬೆಲೆ ಇದೆ. ಇದು ತುಂಬಾ ಕಡಿಮೆಯಾಗಿದ್ದು ರೈತರು ತಾವು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಯೋಗ್ಯ ದರ ಸಿಗದೆ ಸಂಕಷ್ಟಕ್ಕೆ ಸಿಲುಕಿ ಆರ್ಥಿಕವಾಗಿ ದಿವಾಳಿಯಾಗುವ ಸಾಧ್ಯತೆ ಹೆಚ್ಚಿದೆ.
ಹೀಗಾಗಿ ಕೂಡಲೇ ರಾಜ್ಯ ಸರ್ಕಾರವು ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಧಾರವಾಡ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಹಾಗೂ ಹೆಚ್ಚುವರಿಯಾಗಿ ಅವಶ್ಯಕವಿರುವ ಹೋಬಳಿ ಕೇಂದ್ರಗಳಲ್ಲಿ ಕಡಲೆ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಜೋಶಿ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

