ಅತಂತ್ರ ಸ್ಥಿತಿಗೆ ಮಕ್ಕಳ ಕಲಿಕಾಸಕ್ತಿ ಬಲಿ: ಪ್ರಕಾಶ
ಧಾರವಾಡ: ಡೋಲಾಯಮಾನ ಸ್ಥಿತಿಯಲ್ಲಿರುವ ಶಿಕ್ಷಣ ಸ್ಥಿತಿಯಿಂದಾಗಿ ವಿದ್ಯಾರ್ಥಿಗಳ ಕಲಿಕಾಸಕ್ತಿ ಕುಂಠಿತಗೊಳ್ಳುತ್ತಿದೆ ಎಂದು ವಿದ್ಯಾವರ್ಧಕ ಸಂಘದ ಸದಸ್ಯ ಪ್ರಕಾಶ ಉಡಿಕೇರಿ ಹೇಳಿದರು. ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಹುಬ್ಬಳ್ಳಿ-ಧಾರವಾಡ ಮಹಾನಗರ ಆಯೋಜಿಸಿದ್ದ ಶಿಕ್ಷಣದ ವ್ಯಾಪಾರೀಕರಣದ ವಿರುದ್ಧ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆ ಕುರಿತ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದ ವ್ಯಾಪಾರೀಕರಣದಿಂದ ಸಮಾಜದಲ್ಲಿ ಎರಡು ಭಿನ್ನ ಜನರು ಸೃಷ್ಟಿಯಾಗುತ್ತಿದ್ದಾರೆ. ಶಿಕ್ಷಣ ರಂಗ ಗುರು ಭಕ್ತಿಯ ತಳಹದಿಯ ಮೇಲೆ ನಿಂತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಗುರು ಭಕ್ತಿ, ದೇಶ ಭಕ್ತಿಗಿಂತ ಸ್ವಭಕ್ತಿ ಕಲಿಯುವಂತಾಗಿದೆ ಎಂದರು. ಇದರಿಂದಾಗಿ ದೇಶ ತನ್ನ ಮೂಲ ಸಂಸ್ಕೃತಿಗೆ ಧಕ್ಕೆ ತಂದುಕೊಳ್ಳುವುದು ಶತಃಸಿದ್ಧ ಎಂದು ವಿಷಾದಿಸಿದರು. ಎಸ್ಎಫ್ಐ ರಾಜ್ಯಕಾರ್ಯದರ್ಶಿ ಹುಳ್ಳಿ ಉಮೇಶ, ದೇಶದ ಉನ್ನತ ಶಿಕ್ಷಣದ ಗುಣಮಟ್ಟ ಕುಸಿದಿದೆ. ಇಡೀ ಜಗತ್ತಿನಲ್ಲಿಯೇ ಜ್ಞಾನವಂತರನ್ನು ಹೊಂದಿದ ನಮ್ಮ ನಾಡು ಇಂದು ಶೈಕ್ಷಣಿಕವಾಗಿ ಹಿಂದುಳಿದ ನಾಡು ಆಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ, ಬಸವರಾಜ ಪೂಜಾರ, ಮಹೇಶ ಪತ್ತಾರ, ಮಾರುತಿ ಅಂಬಗೇರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

