ಧಾರವಾಡ

ವಿಜಯ ಕುಲಕರ್ಣಿ ಅವಿರೋಧ ಆಯ್ಕೆ

Published On :

ಧಾರವಾಡ: ಮಹಾಲಕ್ಷ್ಮೀ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ವಿಜಯ ಕುಲಕರ್ಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಬಿ.ಐ. ಹುಲಕುಂದ ಪ್ರಕಟಿಸಿದ್ದಾರೆ. ಎರಡನೇ ಬಾರಿಗೆ ವಿಜಯ ಕುಲಕರ್ಣಿ ಬ್ಯಾಂಕಿನ ಆಡಳಿತ ವಹಿಸಿಕೊಂಡಿದ್ದಾರೆ. ಬ್ಯಾಂಕ್ನ ನಿರ್ದೇಶಕರಾದ ಶಶಿಧರ ಹೊಸೂರ, ಅಮೃತೇಶ್ವರ ಬಳ್ಳೊಳ್ಳಿ, ರಮೇಶ ಬಣಕಾರ, ಗುರುಪಾದಪ್ಪ (ರಾಜು) ಮರಳಪ್ಪನವರ, ಸೋಮಶೇಖರ ಸರೂರ ಸೇರಿದಂತೆ ಇತರರು ವಿಜಯ ಕುಲಕರ್ಣಿ ಅವರನ್ನು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ ಕುಲಕರ್ಣಿ, ಸದ್ಯದಲ್ಲಿಯೇ ಬ್ಯಾಂಕಿನ ಐದು ಶಾಖೆಗಳನ್ನು ಧಾರವಾಡ ನಗರ, ಗರಗ, ಹುಬ್ಬಳ್ಳಿ, ನವಲಗುಂದ ಮತ್ತು ಅಣ್ಣಿಗೇರಿಯಲ್ಲಿ ತೆರೆಯಲಾಗುವುದು. ಇದಕ್ಕೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರ ಪರವಾನಗಿ ಸಿಗಲಿದೆ ಎಂದರು.  ಸಾಲ ವಸೂಲಾತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದ್ದು, ಪ್ರತಿದಿನ ಅಂದಾಜು ರು. 1.50  ಲಕ್ಷ ಪಿಗ್ಮಿ ಸಂಗ್ರಹವಾಗುತ್ತಿದ್ದು, ಚಿಕ್ಕ ವ್ಯಾಪಾರಸ್ಥರು ಮತ್ತು ವಹಿವಾಟುದಾರರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ. ಬ್ಯಾಂಕು ರು. 36 ಲಕ್ಷ ನಿವ್ವಳ ಲಾಭದಲ್ಲಿದೆ. ಇದೇ ವೇಳೆ ಅನುತ್ಪಾದಕ ಆಸ್ತಿ ಪ್ರಮಾಣ ತಗ್ಗಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.