ಹಕ್ಕುಗಳನ್ನು ಅರಿಯಿರಿ: ಪುಟ್ಟಪ್ಪನವರ
ಧಾರವಾಡ: ಹಕ್ಕುಗಳ ಬಗ್ಗೆ ಜನರಿಗೆ ಮಾಹಿತಿಯಿದ್ದರೆ ಸರ್ಕಾರದ ಯೋಜನೆಗಳು ಯಶಸ್ವಿಯಾಗುವುದರ ಜೊತೆಗೆ ಭ್ರಷ್ಟಾಚಾರ ನಿರ್ಮೂಲನೆಗೊಳಿಸಲು ಸಾಧ್ಯ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ಎಸ್. ಪುಟ್ಟಪ್ಪನವರ ತಿಳಿಸಿದರು.
ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾರೋಬೆಳವಡಿ ಗ್ರಾಪಂನಿಂದ ತಾಲೂಕಿನ ಹಾರೋಬೆಳವಾಡಿಯಲ್ಲಿ ನಡೆದ ಭಾರತ ನಿರ್ಮಾಣ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ಆಯಾ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿ ನೀಡಬೇಕು. 30 ದಿನಗಳೊಳಗೆ ಕೋರಿದ ಮಾಹಿತಿ ಒದಗಿಸಲಾಗುವುದು. ಮಾಹಿತಿ ಹಕ್ಕು ಕಾಯ್ದೆಯಡಿ ಸರ್ಕಾರದ ಯಾವುದೇ ಕಾರ್ಯಕ್ರಮಗಳ ಕುರಿತು ಮಾಹಿತಿ ಕೇಳುವ ಉದ್ದೇಶ ಸಾಮಾಜಿಕ ಹಿತ ಮತ್ತು ಸಕಾರಾತ್ಮಕವಾಗಿರಲಿ ಎಂದರು. ಗರ್ಭಿಣಿಯರಿಗೆ ಹಣಕಾಸು ನೆರವಿನ ಇಂದಿರಾಗಾಂಧಿ ಮಾತೃತ್ವ ಸಹಯೋಗ ಯೋಜನೆ ಧಾರವಾಡ ಮತ್ತು ಕೋಲಾರ ಜಿಲ್ಲೆಯಲ್ಲಿ ಮಾತ್ರ ಜಾರಿಗೆ ಬಂದಿದ್ದು, ಫಲಾನುಭವಿಗಳಿಗೆ ಧಾರವಾಡ ತಾಲೂಕಿನಲ್ಲಿ ಕಳೆದ ಎರಡೂವರೆ ವರ್ಷದಲ್ಲಿ ರು. 2.20 ಲಕ್ಷ ರುಪಾಯಿ ವಿತರಿಸಲಾಗಿದೆ. ಇಂದಿರಾಗಾಂಧಿ ಮಾತೃತ್ವ ಸಹಯೋಗ ಯೋಜನೆ ಸೇರಿದಂತೆ ಇತರೆ ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮರ್ಪಕ ಮಾಹಿತಿ ನೀಡಿ ಎಂದು ಪುಟ್ಟಣ್ಣವರ ಹೇಳಿದರು. ಶಿಕ್ಷಣ ಹಕ್ಕು ಕಾಯ್ದೆ ಕುರಿತು ಶಿಕ್ಷಕ ವಿ.ಕೆ ಶೆಟ್ಟರ ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅನುಸಾರ ಎಲ್ಲ ಮಕ್ಕಳಿಗೂ ಶಿಕ್ಷಣ ಲಭಿಸಬೇಕು. ಖಾಸಗಿ ಶಾಲೆಗಳಲ್ಲಿನ ಗುಣಮಟ್ಟದ ಶಿಕ್ಷಣ, ದುರ್ಬಲರಿಗೆ ಕೈಗೆಟುಕುವಂತೆ ಮಾಡಲು ಶಿಕ್ಷಣ ಹಕ್ಕು ಕಾಯ್ದೆ ಸಹಕಾರಿಯಾಗಿದೆ. ಖಾಸಗಿ ಶಾಲೆಗಳಲ್ಲಿನ ಶೇ. 25 ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲರಾಗಿರುವವರು ತಪ್ಪದೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಿಂದ ಬಡ ಕುಟುಂಬಗಳಿಗೆ ಲಭಿಸುತ್ತಿರುವ ಆಹಾರ ಧಾನ್ಯದಿಂದ ಹಸಿವು ತೊಡೆದು ಹಾಕಲು ಸಾಧ್ಯ ಎಂದರು. ಹಾರೋಬೆಳವಡಿ ಗ್ರಾಪಂ ಅಧ್ಯಕ್ಷ ಮಂಜುಳಾ ಕಂಬಳಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನಾಮದೇವಪ್ಪ ಪಟ್ಟಾಧಾರಿ, ಬಿ.ಎ. ಬಾವಾಖಾನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

