25ರಂದು ರಾಷ್ಟ್ರೀಯ ವಿಚಾರ ಸಂಕಿರಣ
ಹುಬ್ಬಳ್ಳಿ: ನಗರದ ಕೆಎಲ್ಇ ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಆಶ್ರಯದಲ್ಲಿ 'ರಸಾಯನ ವಿಜ್ಞಾನದಲ್ಲಿ ನೂತನ ಆಶಯಗಳು' ವಿಷಯ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಫೆ. 25ರಂದು ಹಮ್ಮಿಕೊಳ್ಳಲಾಗಿದೆ.
ಪಾಲಿಮರ್ ಸಾಯಿನ್ಸ್, ನ್ಯಾನೊ ಸಾಯಿನ್ಸ್, ಫಾರ್ಮಾಸುಟಿಕಲ್ ಸಾಯನ್ಸ್ ಮತ್ತು ಸ್ಪೆಕ್ಟ್ರೋಸ್ಕೋಪಿಗಳಲ್ಲಿ ಅಣುಗಳು, ಪರಮಾಣುಗಳ ಮೇಲೆ ಆಗಿರುವ ಮತ್ತು ಹೊಸದಾಗಿ ಆಗಬಹುದಾದ ವಿಶ್ಲೇಷಣೆ, ಸಂಶೋಧನೆಗಳ ಮೇಲೆ ವಿಚಾರ ಸಂಕಿರಣ ಬೆಳಕು ಚೆಲ್ಲಲಿದೆ.
ಸಿಎಸ್ಐಆರ್ ವಿಜ್ಞಾನಿ ಡಾ. ಟಿ.ಎಂ. ಅಮ್ಮಿನಭಾವಿ ಅವರು ಅಂದು ಬೆಳಗ್ಗೆ 10ಕ್ಕೆ ವಿಚಾರ ಸಂಕಿರಣ ಉದ್ಘಾಟಿಸುವರು. ಕೆಎಲ್ಇ ಆಡಳಿತ ಮಂಡಳಿ ಸದಸ್ಯ ಎಸ್.ಐ. ಮುನವಳ್ಳಿ ಅಧ್ಯಕ್ಷತೆ ವಹಿಸುವರು.
ಅಂದು ನಡೆಯಲಿರುವ ನಾಲ್ಕು ಗೋಷ್ಠಿಗಳಲ್ಲಿ ಡಾ. ಟಿ.ಎಂ. ಅಮ್ಮಿನಭಾವಿ, ಗುಲ್ಬರ್ಗಾ ವಿಶ್ವವಿದ್ಯಾಲಯ ರಸಾಯನ ಶಾಸ್ತ್ರದ ಪ್ರಾಧ್ಯಾಪಕ ಪ್ರೊ. ಎ. ವೆಂಕಟರಾಮನ್, ಬೆಂಗಳೂರಿನ ಹೈಕಲ್ ಲಿಮಿಟೆಡ್ನ ಆರ್ ಆ್ಯಂಡ್ ಡಿ ಸೆಂಟರ್ನ ಮುಖ್ಯಸ್ಥ ಡಾ. ವಾದಿರಾಜ ಎಕ್ಕುಂಡಿ, ಕರ್ನಾಟ ವಿಶ್ವವಿದ್ಯಾಲಯ ರಸಾಯನ ಶಾಸ್ತ್ರದ ಪ್ರಾಧ್ಯಾಪಕ ಪ್ರೊ. ಎಂ.ವಿ. ಕುಲಕರ್ಣಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು.
ಅಂದು ಸಂಜೆ 4ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಜೆ.ಪಿ. ಜಾಬಿನ್ ವಹಿಸುವರು. ಉಪನ್ಯಾಸಕರು, ಪ್ರಾಧ್ಯಾಪಕರು, ಸಂಶೋಧಕರು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಕೋರಲಾಗಿದೆ. ಮಾಹಿತಿಗೆ ಸಂಘಟನಾ ಕಾರ್ಯದರ್ಶಿ ಪ್ರೊ. ವಿ.ವೈ. ವಾಸನದ (ಮೊ.ಸಂ. 94480 16012) ಅವರನ್ನು ಸಂಪರ್ಕಿಸಲು ಪ್ರಾಚಾರ್ಯ ಡಾ. ಎಂ.ಟಿ. ಹೊಸಮನಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

