ಧಾರವಾಡ: ಇಂದು ಪ್ರೊ. ಎ.ಎಸ್.ಬಾಲಸುಬ್ರಹ್ಮಣ್ಯಗೆ ಗುರುವಂದನೆ
ಧಾರವಾಡ: ಮೂರುವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಪ್ರೀತಿಯ 'ಬಾಲು ಸರ್' ಆಗಿರುವ ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ ಎ.ಎಸ್. ಬಾಲಸುಬ್ರಹ್ಮಣ್ಯ ನಿವೃತ್ತರಾಗಿದ್ದು, ಫೆ. 23ರಂದು ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಗುರುವಂದನೆ ಹಾಗೂ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಕವಿವಿಯ ಮಾನಸೋಲ್ಲಾಸ ಸಭಾಂಗಣದಲ್ಲಿ ಭಾನುವಾರ ಬೆಳಗ್ಗೆ 10ಕ್ಕೆ ವಿಚಾರ ಸಂಕಿರಣ ಆಯೋಜಿಸಲಾಗಿದೆ. 'ಬದಲಾಗುತ್ತಿರುವ ಭಾರತದಲ್ಲಿ ಮಾಧ್ಯಮಗಳ ಪಾತ್ರ' ಕುರಿತು ಪ್ರೊ ಬಾಲಸುಬ್ರಹ್ಮಣ್ಯ ಪ್ರಾಸ್ತಾವಿಕ ನುಡಿ ಆಡಲಿದ್ದಾರೆ. ನಾಡೋಜ ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸುವರು. ಪತ್ರಕರ್ತ ಸುಗತ ಶ್ರೀನಿವಾಸರಾಜು ಪ್ರಧಾನ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಪ್ರೊ ಎ.ಎಸ್. ಬಾಲಸುಬ್ರಹ್ಮಣ್ಯ ಅವರಿಗೆ ಹಳೆಯ ವಿದ್ಯಾರ್ಥಿಗಳ ಸಂಘ ಗುರುವಂದನೆ ಸಲ್ಲಿಸಲಿದೆ. ವಿಭಾಗದ ಸಹ ಪ್ರಾಧ್ಯಾಪಕ ಡಾ ಜೆ.ಎಂ. ಚಂದುನವರ ಹಾಗೂ ತಂಡ 'ಬಾಲು ಸರ್' ಬಗ್ಗೆ ನಿರ್ಮಿಸಿದ ಕಿರುಚಿತ್ರ ಪ್ರದರ್ಶನವಿದೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ ಅಮೀನಮಟ್ಟು, ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ ಮುಖ್ಯ ಅತಿಥಿಗಳು. ಕವಿವಿ ಕುಲಪತಿ ಡಾ ಎಚ್.ಬಿ. ವಾಲೀಕಾರ ವಿಶೇಷ ಆಹ್ವಾನಿತರಾಗಿ ಅಭಿನಂದನ ಗ್ರಂಥ ಬಿಡುಗಡೆ ಮಾಡುವರು. ಮಧ್ಯಾಹ್ನ ವಿಭಾಗದ ಹಳೆಯ ವಿದ್ಯಾರ್ಥಿಗಳಿಂದ 'ಕೊನೆ ನಮಸ್ಕಾರ' ಹಾಸ್ಯ ನಾಟಕ ಪ್ರದರ್ಶನವಿದೆ ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯಾಧ್ಯಕ್ಷ ಬಸವರಾಜ ಕಂಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

