ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ: ಆಕ್ರೋಶ
ಕಲಘಟಗಿ: ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ಕಾಂಗ್ರೆಸ್ ಸೇರಿದಂತೆ ಮತ್ತಿತರ ಪಕ್ಷಗಳಿಂದ ವಲಸೆ ಬಂದವರನ್ನು ಮಣೆ ಹಾಕಲಾಗುತ್ತಿದೆ...
ಇಂತಹದೊಂದು ಅಪಸ್ವರ ಕೇಳಿ ಬಂದಿದ್ದು ಪಟ್ಟಣದ ಹನ್ನೆರಡು ಮಠದ ಆವರಣದಲ್ಲಿ ದೇವಿಕೊಪ್ಪ ಜಿಪಂ ವ್ಯಾಪ್ತಿಯ ಹಾಗೂ ಬೋಗೆನಾಗರಕೊಪ್ಪ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ.
ತಾಲೂಕಿನಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಉಭಯ ಸಭೆಯಲ್ಲಿ ಪಾಲ್ಗೊಂಡಿದ್ದ ಬಹುತೇಕ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದರ ಪರಿಣಾಮ ಕೆಲಕಾಲ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಗುರುನಾಥಗೌಡ ಬಸನಗೌಡ್ರ, ಚನ್ನಯ್ಯ ಬುಗಟಗಾರ ಸೇರಿದಂತೆ ಅನೇಕರು, ತಾಲೂಕು ಮುಖಂಡರ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಸಭೆಯ ಅಧ್ಯಕ್ಷತೆವಹಿಸಿದ್ದ ಎನ್ಜಿಇಎಫ್ ಮಾಜಿ ಅಧ್ಯಕ್ಷ ಸಿ.ಎಂ. ನಿಂಬಣ್ಣವರ, ಜಿಪಂ ಅಧ್ಯಕ್ಷ ಶಂಕ್ರಣ್ಣ ಅಗಡಿ, ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯಾಸ ಪಡಬೇಕಾಯಿತು.
ಅನಂತರ ಮಧ್ಯಪ್ರವೇಶಿಸಿದ ಪಕ್ಷದ ಗ್ರಾಮೀಣ ಅಧ್ಯಕ್ಷ ಷಣ್ಮುಖ ಗುರಿಕಾರ, ಯಾವೊಬ್ಬ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರೇ ಪಕ್ಷದ ಶಕ್ತಿಯಾಗಿದ್ದಾರೆ ಎಂಬುದನ್ನು ಯಾರೂ ಮರೆಯುತ್ತಿಲ್ಲ ಎಂದು ಹೇಳುವ ಮೂಲಕ ಕಾರ್ಯಕರ್ತರ ಮನವೊಲಿಸುವಲ್ಲಿ ಯಶಸ್ವಿಯಾದರು.
ಈ ಮಧ್ಯೆ ಲೋಕಸಭೆ ಚುನಾವಣೆ ಕುರಿತಂತೆ ಕಾರ್ಯಕರ್ತರು ಹಾಗೂ ಮುಖಂಡರು ವಿಸ್ತೃತವಾಗಿ ಚರ್ಚಿಸಿದರಲ್ಲದೇ, ಅಭ್ಯರ್ಥಿ ಗೆಲುವಿಗೆ ಮಾಡಬೇಕಾದ ಕಾರ್ಯತಂತ್ರಗಳ ಬಗ್ಗೆ ಸಲಹೆ-ಸೂಚನೆ ಪಡೆದರು.
ತಾಲೂಕು ಬಿಜೆಪಿ ಅಧ್ಯಕ್ಷ ವೈ.ಎನ್. ಪಾಟೀಲ, ತಾಪಂ ಅಧ್ಯಕ್ಷ ಮಲ್ಲೇಶಪ್ಪ ಜಾವೂರ, ಸಾಧು ಚಿಂತಾಮಣಿ, ಯಲ್ಲಾರಿ ಶಿಂಧೆ, ಬಸವರಾಜ ಪರವಾಪೂರ, ನಿಂಗಪ್ಪ ಸೂತಗಟ್ಟಿ, ಶಿವಾನಂದ ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

