ಧಾರವಾಡ

ಸ್ವಾವಲಂಬಿಯಾಗಿ: ಲಿಂಗರಾಜ

Published On :

ಹುಬ್ಬಳ್ಳಿ: ಬೇರೊಬ್ಬರು ತಮ್ಮ ಜೀವನ ಮೇಲ್ಮಟ್ಟಕ್ಕೇರಲು ಸಹಾಯ ಮಾಡುವರೆಂಬ ಮನೋಭಾವನೆಯನ್ನು ವಿದ್ಯಾರ್ಥಿಗಳು ತೊರೆಯಬೇಕಲ್ಲದೇ, ವಿದ್ಯಾರ್ಥಿ ದೆಸೆಯಿಂದಲೇ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಮೂಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗರಾಜ ಅಂಗಡಿ ಹೇಳಿದರು.
ಇಲ್ಲಿಯ ಡಾ. ಡಿ.ಜಿ. ಶೆಟ್ಟಿ ಎಜ್ಯುಕೇಶನಲ್ ಸೊಸೈಟಿಯ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ವಾರ್ಷಿಕ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹಿಂಜರಿಕೆ ಬಿಟ್ಟು ತಮ್ಮಲ್ಲಿನ ಪ್ರತಿಭೆಗಳನ್ನು ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.
ಉಡುಪಿಯ ನಿವೃತ್ತ ಸಹಕಾರಿ ಅಭಿವೃದ್ಧಿ ಅಧಿಕಾರಿ ರಘುರಾಮ ಶೆಟ್ಟಿ ಅವರಿಗೆ 'ವಿದ್ಯಾ ಪೋಷಕ' ಹಾಗೂ ಬೆಂಗಳೂರಿನ ಎಸ್ಐಆರ್ಸಿ ಅಫ್ ದಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾದ ನಿವೃತ್ತ ಚೇರಮನ್ ಸಿ.ಎಸ್. ದ್ವಾರಕಾಥ ಅವರಿಗೆ 'ವಿದ್ಯಾ ವಿಕಾಸ' ಪ್ರಶಸ್ತಿಗಳನ್ನು ಇದೇ ಸಂದರ್ಭದಲ್ಲಿ ನೀಡಿ, ಸನ್ಮಾನಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಡಾ. ಡಿ.ಜಿ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರೊ. ಎಸ್.ಎಂ. ಸಾಲಿಮಠ, ಪ್ರೊ. ನಂದಾ ಹಂಪಿಹೊಳಿ ನಿರೂಪಿಸಿದರು. ಪ್ರೊ. ಎನ್.ಎಫ್. ನದಾಫ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.