ಕೋರ್ಟ್ ಆವರಣದಲ್ಲೇ ರೈತ ಆತ್ಮಹತ್ಯೆಗೆ ಯತ್ನ
ಧಾರವಾಡ: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿನ ಸಿವಿಲ್ ನ್ಯಾಯಾಲಯದ ವಿಚಾರಣಾ ಕೊಠಡಿಯಲ್ಲಿ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕೆಲಗೇರಿ ಗ್ರಾಮದ ಕಾಶಪ್ಪ ಮಲ್ಲೇಶಪ್ಪ ಹೂಗಾರ (55) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ. ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿನ 10 ಎಕರೆ ಜಮೀನಿಗೆ ಸಂಬಂಧಿಸಿದಂತೆ ಕಾಶಪ್ಪ ಹೂಗಾರ ಮತ್ತು ಆತನ ಸಹೋದರರ ಮಧ್ಯೆ ವಿವಾದವಿತ್ತು. ಈ ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಕುರಿತು ನ್ಯಾಯಾಲಯಕ್ಕೆ ಬಂದಾಗಲೇ ಕಾಶಪ್ಪ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ. ಉಪ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

