ಬಿಸಿಲ ಬೇಗೆ ತಣಿಸಿದ ಅಕಾಲಿಕ ಮಳೆ
ಧಾರವಾಡ/ಗದಗ: ಕಳೆದ ಒಂದು ವಾರದಿಂದ ಬೇಸಿಗೆ ಬಿಸಿ ಅನುಭವಿಸಿದ ಧಾರವಾಡ ಮತ್ತು ಹುಬ್ಬಳ್ಳಿಯ ನಾಗರಿಕರಿಗೆ ಬುಧವಾರ ಮಧ್ಯಾಹ್ನ ಸುರಿದ ಅಕಾಲಿಕ ಮಳೆ ತಣ್ಣನೆಯ ಅನುಭವ ನೀಡಿದೆ.
ಬುಧವಾರ ಸಂಜೆ 4ರಿಂದ ಧಾರವಾಡದಲ್ಲಿ ಮೋಡ ಮುಸುಕಿದ ವಾತಾವರಣ ಇತ್ತು. ಧಾರವಾಡ ನಗರದಲ್ಲಿ ಮಳೆಯಾಗದಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಸಂಜೆ 5ರಿಂದ 6ರ ವರೆಗೆ ಒಂದು ಗಂಟೆ ಧಾರಾಕಾರ ಮಳೆಯಾಗಿದೆ. ಧಾರವಾಡ ನಗರದಲ್ಲಿ ವಾತಾವರಣ ಬರೀ ಮೋಡ ಮಸುಕಿದ್ದು ಗ್ರಾಮೀಣ ಪ್ರದೇಶವಾದ ಉಪ್ಪಿನ ಬೆಟಗೇರಿ, ಹೆಬ್ಬಳ್ಳಿ, ಗರಗ ಮತ್ತಿತರೆ ಗ್ರಾಮಗಳಲ್ಲಿ ಮಳೆ ಸುರಿದಿದೆ. ಹುಬ್ಬಳ್ಳಿ ನಗರ ಪ್ರದೇಶದಲ್ಲಿ ಕೇಶ್ವಾಪುರ ಮತ್ತು ಗೋಪನಕೊಪ್ಪ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ.
ಗದಗ ಜಿಲ್ಲೆಯಲ್ಲಿ ಮಳೆ: ಗದಗ ಜಿಲ್ಲೆಯ ರೋಣ, ಗಜೇಂದ್ರಗಡ, ಲಕ್ಷ್ಮೇಶ್ವರ, ನರಗುಂದ ಹಾಗೂ ತಾಲೂಕಿನ ಕೆಲ ಗ್ರಾಮಗಳಲ್ಲಿ ಬಹುತೇಕ ಪಟ್ಟಣಗಳಲ್ಲಿ ಬುಧವಾರ ಸಂಜೆ 20 ನಿಮಿಷಕ್ಕೂ ಹೆಚ್ಚು ಕಾಲ ಮಳೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

