ಧಾರವಾಡ

ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಿ

Published On :

ಕನ್ನಡಪ್ರಭ ವಾರ್ತೆ, ಕುಂದಗೋಳ, ಫೆ. 27
ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ತಾಪಂ ಅಧ್ಯಕ್ಷೆ ಲಕ್ಷ್ಮವ್ವ ಹಂಚಿನಾಳ ಆದೇಶ ನೀಡಿದರು.
ಪಟ್ಟಣದ ತಾಪಂ ಸಭಾ ಭವನದಲ್ಲಿ ನಡೆದ 2013-14ನೇ ಸಾಲಿನ ಕೊನೆಯ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ನಡೆಯಬೇಕಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಉಪಸ್ಥಿತರಿದ್ದ ಬಹುಪಾಲ ಸದಸ್ಯರು ಪಾಲ್ಗೊಂಡು, ಇಲಾಖೆ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಮಧ್ಯಪ್ರವೇಶಿಸಿದ ಅಧ್ಯಕ್ಷೆ ಹಂಚಿನಾಳ, ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡುವ ಮೂಲಕ ಚರ್ಚೆಗೆ ವಿರಾಮ ಹಾಕಿದರು.
ಅರಣ್ಯ ಇಲಾಖೆ ವತಿಯಿಂದ ನಡೆದಿರುವ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಜಿಪಂ ಸದಸ್ಯ ವೆಂಕನಗೌಡ ಹಿರೇಗೌಡ್ರ, ಈವರೆಗೂ ನೆಟ್ಟಿರುವ ಸಸಿಗಳು ಎಷ್ಟು ಹಾಗೂ ಎಷ್ಟು ವ್ಯಯಿಸಲಾಗಿದೆ ಎಂಬ ವಿವರವನ್ನು ಸಭೆಯ ತಿಳಿಸುವಂತೆ ಆಗ್ರಹಿಸಿದರು. ಇದಕ್ಕೆ ಉತ್ತರಿಸಲು ಅರಣ್ಯಇಲಾಖೆ ಅಧಿಕಾರಿ ಪಾಚಂಗಿ ಮುಂದಾದರಾದರೂ ಸೂಕ್ತ ಉತ್ತರ ನೀಡದ್ದರಿಂದ ಸದಸ್ಯರ ಆಕ್ರೋಶಕ್ಕೆ ಗುರಿಯಾದರು.
ಗ್ರಾಪಂ ಸದಸ್ಯ ಬಾವಿಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಳಸ ಗ್ರಾಮದಲ್ಲಿ ಆರು ವರ್ಷಗಳ ಹಿಂದೆಯೇ ನಿರ್ಮಾಣಗೊಂಡಿದ್ದರೂ ಈವರೆಗೂ ಉದ್ಘಾಟನೆಗೊಂಡಿಲ್ಲ. ಈ ಕೇಂದ್ರಗಳು ಶೀಫ್ರ ಕಾರ್ಯಾರಂಭಗೊಳ್ಳುವಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.