ಧಾರವಾಡ

ಯಶವಂತಪುರ-ಜೈಪುರ ವಿಶೇಷ ರೈಲು

Published On :

ಹುಬ್ಬಳ್ಳಿ: ಜನವರಿ 2, 2014ರಿಂದ ಪ್ರತಿ ಗುರುವಾರ ಯಶವಂತಪುರ-ಜೈಪುರ ಮಧ್ಯೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಸೌಲಭ್ಯವನ್ನು ನೈಋತ್ಯ ರೇಲ್ವೆ ಕಲ್ಪಿಸಿದೆ. ಗುರುವಾರ ಬೆಳಗ್ಗೆ 10.45ಕ್ಕೆ ಯಶವಂತಪುರ ರೈಲು ನಿಲ್ದಾಣದಿಂದ ಹೊರಡುವ ರೈಲು ತುಮಕೂರು, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ, ಗುಂತಕಲ್, ಪುಣೆ ಮಾರ್ಗವಾಗಿ ಜೈಪುರ ತಲುಪಲಿದೆ. ಜೈಪುರದಿಂದ ಹೊರಡುವ ರೈಲು ಮಂಗಳವಾರ ಬೆಳಗ್ಗೆ 3.35ಕ್ಕೆ ಯಶವಂತಪುರ ರೈಲು ನಿಲ್ದಾಣಕ್ಕೆ ಆಗಮಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಆಸ್ತಿ ಕಬಳಿಕೆ- ಮಹಿಳೆಗೆ ವಂಚನೆ: ದೂರು
ಹುಬ್ಬಳ್ಳಿ: ಮಹಿಳೆಯ ಹೆಸರಿನಲ್ಲಿರುವ ಆಸ್ತಿ ಕಬಳಿಸುವ ನಿಟ್ಟಿನಲ್ಲಿ ವಂಚನೆ ಎಸಗಿದ ಕುರಿತು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದ ಮಹಿಳೆಯೊಬ್ಬರು ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ತಿಳವಳ್ಳಿ ಗ್ರಾಮದ ಮಹಿಳೆ ಶಾಂತಮ್ಮ ಧರ್ಮಣ್ಣ ರಾವಳ ಅವರ ಹೆಸರಿನಲ್ಲಿ ಹುಬ್ಬಳ್ಳಿ ನಗರದಲ್ಲಿದ್ದ ಆಸ್ತಿಯನ್ನು ಕಬಳಿಸುವ ಉದ್ದೇಶದಿಂದ ಮಹಾವೀರ ಧನಪಾಲ ಧುಪದಾಳೆ ಮತ್ತು ಇನ್ನಿಬ್ಬರು ಸೇರಿ ಮಹಿಳೆಯಿಂದ ಮೋಕ್ತಿಯಾರ ಪತ್ರ ಬರೆಸಿಕೊಂಡಿದ್ದಾರೆ. ಅಲ್ಲದೆ, ಆಸ್ತಿಯನ್ನು ರು. 40 ಲಕ್ಷಕ್ಕೆ ಖರೀದಿಸಲಾಗಿದೆ ಎಂದು ಹುಬ್ಬಳ್ಳಿ ಉಪನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ಖರೀದಿ ಬರೆಸಿಕೊಂಡು ಹಣ ನೀಡದೇ ವಂಚಿಸಿದ್ದಾರೆ ಎಂದು ದೂರು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.