ಧಾರವಾಡ

ಹೊಸ ವರ್ಷಾಚರಣೆ: ಮನೆ ಮೇಲೆ ಕಲ್ಲು ತೂರಾಟ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜ. 1
ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಪಾನಮತ್ತರಾಗಿದ್ದ ಕಿಡಿಗೇಡಿಗಳ ಗುಂಪೊಂದು ಮನೆಯೊಂದರ ಮೇಲೆ ಕಲ್ಲು ಹಾಗೂ ಬಾಟಲಿಗಳನ್ನು ಎಸೆದು ಪುಂಡಾಟಿಕೆ ನಡೆಸಿದ ಘಟನೆ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಬರಿನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.
ವಸಂತ ಬಿಳಿಯಾಲಿ ಎಂಬುವರ ಮನೆ ಮೇಲೆ ಕಲ್ಲು ಹಾಗೂ ಬಾಟಲಿ ತೂರಾಟ ನಡೆಸಲಾಗಿದ್ದು ಘಟನೆಗೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಲ್ಲು ತೂರಾಟದಿಂದಾಗಿ ಬಿಳಿಯಾಲಿ ಅವರ ಮನೆಯ ಮೇಲೆ ಅಳವಡಿಸಿದ್ದ ಸೋಲಾರ್ ಉಪಕರಣ ಸಂಪೂರ್ಣ ಜಖಂಗೊಂಡಿದೆ.
ಬಿಳಿಯಾಲಿ ಅವರ ಮನೆ ಎದುರು ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ರಾತ್ರಿವರೆಗೂ ಹೊಸ ವರ್ಷಾಚರಣೆ ಅಂಗವಾಗಿ ಪಾರ್ಟಿ ಏರ್ಪಡಿಸಿದ್ದ ಕಿಡಿಗೇಡಿಗಳು, ರಾತ್ರಿವೇಳೆಯಲ್ಲಿ ಪಾನಮತ್ತರಾಗಿ ಈ ದುಷ್ಕೃತ್ಯ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಆಯುಕ್ತ ರವೀಂದ್ರ ಪ್ರಸಾದ ಅವರು ಇಡೀ ನಗರದಲ್ಲಿ ನಾಕಾಬಂದಿಗೊಳಿಸಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದ್ದು ಪ್ರಜ್ಞಾವಂತರಲ್ಲಿ ಆತಂಕ ಹೆಚ್ಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.