ಧಾರವಾಡ: ನಾಳೆ ಅತಿಥಿ ಉಪನ್ಯಾಸಕರ ಸಮಾವೇಶ
ಧಾರವಾಡ: ಸೇವಾ ಭದ್ರತೆ, ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜ. 5ರಂದು ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಅತಿಥಿ ಉಪನ್ಯಾಸಕರ ಸಮಾವೇಶ ನಡೆಯಲಿದೆ.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಾವಿರಾರು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸಹಾಯಕ ಪ್ರಾಧ್ಯಾಪಕರ ಕೆಲಸ ಮಾಡಿದರೂ ಕೆಲಸಕ್ಕೆ ತಕ್ಕ ಸಂಬಳ ಇಲ್ಲ. ಸೇವಾ ಭದ್ರತೆ ಇಲ್ಲ. ಈ ಹಿಂದೆ ನೇಮಕಾತಿಯಲ್ಲಿ ಪ್ರಾಶಸ್ತ್ಯ ಹಾಗೂ ಕೃಪಾಂಕನೀಡುತ್ತಿದ್ದು, ಈ ಶೈಕ್ಷಣಿಕ ವರ್ಷದಿಂದ ನಿಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಪ್ರತಿನಿಧಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಅತಿಥಿ ಉಪನ್ಯಾಸಕರ ಬೇಡಿಕೆಗಳಾದ ಸೇವಾ ಭದ್ರತೆ ಒದಗಿಸಿ ಪ್ರಸಕ್ತ ಸಾಲಿನ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸಬೇಕು. ಯುಜಿಸಿ ನಿಯಮಾವಳಿಯಂತೆ ವೇತನ ನಿಗದಿ ಪಡಿಸಿ 12 ತಿಂಗಳು ವೇತನ ನೀಡಬೇಕು. ಸೇವಾಜ್ಯೇಷ್ಠತೆಗೆ ಅನುಗುಣವಾಗಿ ಹಾಗೂ ವಯೋವುತಿ ಮೀರುತ್ತಿರುವ ಉಪನ್ಯಾಸಕರಿಗೆ ಪೂರ್ಣಾವಧಿ ಸೇವೆಗೆ ಅವಕಾಶ ನೀಡಬೇಕು ಎದು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ಕಲಾಭವನದಿಂದ ಸರ್ಕಾರಿ ನೌಕರರ ಭವನದವರೆಗೆ ಮೆರವಣಿಗೆ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮಾವೇಶ ಉದ್ಘಾಟಿಸುವರು. ನಾಡೋಜ ಡಾ. ಪಾಟೀಲ ಪುಟ್ಟಪ್ಪ, ಮಾಜಿ ಸಚಿವ ಸಂತೋಷ ಲಾಡ್, ಶಾಸಕರಾದ ವಿನಯ ಕುಲಕರ್ಣಿ, ಅರವಿಂದ ಬೆಲ್ಲದ ಭಾಗವಹಿಸುವರು ಎಂದು ಒಕ್ಕೂಟದ ಜಿ.ಜಿ. ಹೊಂಕಣ, ಸುಶೀಲ ಜಾಧವ, ಡಾ.ವೈ.ಎಂ. ಗಿಡ್ಡಮಾಸ್ತೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

