ಮಕ್ಕಳಿಂದ ಮೊಬೈಲ್ ದೂರವಿರಿಸಿ: ಹಲಗತ್ತಿ
ಧಾರವಾಡ: ಮೊಬೈಲ್ ಫೋನ್ಗಳು ಯುವ ಜನಾಂಗವನ್ನು ಅಧಃಪತನಗೊಳಿಸುತ್ತಿದ್ದು, ಪಾಲಕರು ಮಕ್ಕಳನ್ನು ಮೊಬೈಲ್ನಿಂದ ದೂರ ಇರಿಸಬೇಕು ಎಂದು ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.
ನೆಹರು ಯುವ ಕೇಂದ್ರ, ಛತ್ರಪತಿ ಶಿವಾಜಿ ಮಹಾರಾಜ ಕಾಲೇಜು ಹಾಗೂ ಸೌಹಾರ್ದ ಯೂಥ್ ಮೂವ್ಮೆಂಟ್ ಜಂಟಿಯಾಗಿ ನಗರದಲ್ಲಿ ಏರ್ಪಡಿಸಿದ್ದ ಯುವ ನಾಯಕತ್ವ ಹಾಗೂ ಆರೋಗ್ಯದ ಕುರಿತು ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮೊಬೈಲ್ನಿಂದ ಯುವಕರ, ಮಕ್ಕಳ ಶಿಕ್ಷಣ ಹಾಗೂ ಭವಿಷ್ಯ ಹಾಳಾಗುತ್ತಿದೆ. ಈ ಕುರಿತು ಪಾಲಕರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.
ಜಿಲ್ಲಾ ಯುವ ಸಮನ್ವಯ ಅಧಿಕಾರಿ, ಎಸ್.ಯು. ಜಮಾದಾರ, ಆಧುನಿಕ ಯುಗದಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ, ಯುವಕರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಪ್ರಾಚಾರ್ಯ ಎಂ.ಎಸ್. ಗಾಣಿಗೇರ, ಎಂ.ಎಂ. ವನಳ್ಳಿ ಹಾಗೂ ಈಶ್ವರ ಕರಾತ ಮಾತನಾಡಿದರು. ನೆಹರು ಯುವ ಕೇಂದ್ರದ ಎ.ಜಿ. ಪುರಾಣಿಕ, ಉಪನ್ಯಾಸಕ ಟಿ. ನಾಗರಾಜ, ಕೀರ್ತಿ ಮಾಳಿ, ಶಿವಾನಂದ ಗಾಣಿಗೇರ, ಶಿವಾಲಿ ನಲವಡೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

