ಧಾರವಾಡ

ಕಾವೇರಿದ ಕಲಘಟಗಿ ತಾಪಂ ಸಭೆ

Published On :

ಕಲಘಟಗಿ: ಅನುದಾನ ದುರ್ಬಳಕೆ, ಪಡಿತರ ಚೀಟಿಗಾಗಿ ಪರದಾಟ, ಭಾಗ್ಯ ಲಕ್ಷ್ಮಿ ಬಾಂಡ್ ವಿತರಣೆಯಲ್ಲಿ ವಿಳಂಬ ಹಾಗೂ ತಾಲೂಕಿನಾದ್ಯಂತ ನಡೆದಿರುವ ವಿದ್ಯುತ್ ಕಳ್ಳತನ ಪ್ರಕರಣಗಳು ಸೋಮವಾರ ನಡೆದ ತಾಪಂ ಸಭೆಯಲ್ಲಿ ಕಾವೇರಿದ ಚರ್ಚೆಗೆ ಗ್ರಾಸ ಒದಗಿಸಿದವು.
ಅಧ್ಯಕ್ಷ ಎಂ.ಎಫ್. ಜಾವೂರ ಅಧ್ಯಕ್ಷತೆಯಲ್ಲಿ ಬೆಳಗ್ಗೆ ನಡೆದ ಸಭೆಯಲ್ಲಿ ತಾಲೂಕಿನಲ್ಲಿ ಶೈಕ್ಷಣಿಕ ಮಾಹಿತಿ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯವಸ್ಥಾಪಕ ಸಿ.ಸಿ. ಅಳಗವಾಡಿ ಮುಂದಾದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ಪಟ್ಟಣದ ಮಾದರಿ ಕೇಂದ್ರ ಶಾಲೆಯ ಕಾಂಪೌಂಡ್ ನಿರ್ಮಾಣದಲ್ಲಿ ಮುಖ್ಯೋಪಾಧ್ಯಾಪಕಿ ಆರ್.ಎಲ್. ಮ್ಯಾಗೇರಿ ನಡೆಸಿದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಪಟ್ಟು ಹಿಡಿದರು. ಇದರಿಂದಾಗಿ ಕೆಲಕಾಲ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು. ನಂತರ ಮತ್ತೆ ಮಾತಿಗಿಳಿದ ಅಳಗವಾಡಿ ಈ ಕುರಿತಂತೆ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪಡಿತರ ಚೀಟಿ, ಅನ್ನಭಾಗ್ಯ ಯೋಜನೆ ತಾಲೂಕಿನಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಲಾಗುತ್ತಿಲ್ಲ ಎಂಬ ಎಲ್ಲ ಒಕ್ಕೂರಲಿನಿಂದ ಕೇಳಿ ಬಂದ ಆರೋಪಕ್ಕೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ವಿಜಯ ಶೆಟ್ಟೆಪ್ಪ, ಈ ಕುರಿತಂತೆ ಶೀಫ್ರದಲ್ಲೇ ಸೂಕ್ತ ಕ್ರಮಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ತಿಳಿಸಿದರು.
ತಾಪಂ ಕಚೇರಿ ಹತ್ತಿರದಲ್ಲೇ ಇರುವ ರೇಷ್ಮ ಇಲಾಖೆಯಲ್ಲಿ ಸೂಕ್ತ ಸಿಬ್ಬಂದಿ ನಿಯೋಜಿಸುವಂತೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲು ಕಾರ್ಯನಿರ್ವಾಹಕಾಧಿಕಾರಿ ಎಸ್.ಆರ್. ವೀರಕರ ಅವರಿಗೆ ಸಭೆಯಲ್ಲಿ ಸೂಚಿಸಲಾಯಿತು.
ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾ ರಜಪೂತ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಹೇಮಣ್ಣವರ, ಬಿ.ಆರ್. ಚಿಕ್ಕಮಠ, ಆರ್.ಬಿ. ಜಮಖಂಡಿ, ಸೋಮಲಿಂಗಪ್ಪ, ಎ. ಎಫ್.ಕಟ್ಟಿಮನಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.