ಧಾರವಾಡ

ಲೋಕಸಭೆಗೆ ಸ್ಪರ್ಧಿಸುವುದು ಖಚಿತ: ಪ್ರಮೋದ ಮುತಾಲಿಕ್

Published On :

ಹುಬ್ಬಳ್ಳಿ; ಲೋಕಸಭೆ ಚುನಾವಣೆಗಾಗಿ ನಾನು ಸ್ಪರ್ಧಿಸುವುದು ನಿಶ್ಚಿತ, ಇದರಲ್ಲಿ ಯಾವುದೇ ಸಂಶಯ ಬೇಡ...
ಹೀಗೆಂದವರು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್.
ಹುಬ್ಬಳ್ಳಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಧಾರವಾಡ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ ಅಥವಾ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದೇವೆ. ಈ ಕುರಿತು ಸೇನೆ ಪ್ರಮುಖರೊಂದಿಗೆ ಚರ್ಚಿಸಿ ಇಷ್ಟರಲ್ಲಿಯೇ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಶ್ರೀರಾಮ ಸೇನೆಯಿಂದ ಕೇವಲ ತಾವೊಬ್ಬರೇ ಅಲ್ಲದೇ, 5 ರಿಂದ 6 ಜನ ಚುನಾವಣೆಗೆ ಸ್ಪರ್ಧಿಸುವ ಇಚ್ಛೆ ಇಟ್ಟುಕೊಂಡಿದ್ದೇವೆ. ಆ ಅಭ್ಯರ್ಥಿಗಳ ಹೆಸರನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿದ ಮುತಾಲಿಕ್, ಹಿಂದೂ ಧರ್ಮ ರಕ್ಷಣೆಗೆ ಯಾವುದೇ ಪಕ್ಷಗಳು ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಪ್ರಮುಖರು ರಾಜಕೀಯಕ್ಕೂ ಪ್ರವೇಶಿಸುವ ಅನಿವಾರ್ಯತೆ ವ್ಯಕ್ತವಾಗಿದೆ. ನಾನು ಚುನಾವಣೆಗೆ ಸ್ಪರ್ಧಿಸುವುದರಲ್ಲಿ ತಪ್ಪೇನಿದೆ? ಎಂದರು.
ಚುನಾವಣೆಯ ನಿರ್ಧಾರದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ. ಯಾವುದೇ ಒತ್ತಡ, ಆಮಿಷಕ್ಕೆ ಒಳಗಾಗುವವನು ನಾನಲ್ಲ. ಇಂಥ ಯೋಚನೆ ಬೇಡವೇ ಬೇಡ ಎಂದು ಮುತಾಲಿಕ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.